HomeKarnatakaಶಾಸಕ ಮುನಿರತ್ನಗೆ ನಿರೀಕ್ಷಣಾ ಜಾಮೀನು ಮಂಜೂರು

ಶಾಸಕ ಮುನಿರತ್ನಗೆ ನಿರೀಕ್ಷಣಾ ಜಾಮೀನು ಮಂಜೂರು

ಬೆಂಗಳೂರು: ಬೆಂಗಳೂರಿನ ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ತನ್ನ ವಿರುದ್ಧ ದಾಖಲಾಗಿರುವ ಎಫ್ಐಆರ್ ಹಿನ್ನೆಲೆಯಲ್ಲಿ ಬಂಧನ ಭೀತಿಯಲ್ಲಿದ್ದ ಶಾಸಕ ಮುನಿರತ್ನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚರಣೆ ನಡೆಸಿದ ನ್ಯಾಯಾಲಯ ಮುನಿರತ್ನಗೆ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2 ಲಕ್ಷ ರೂ ಬಾಂದ್, ಇಬ್ಬರು ಶ್ಯೂರಿಟಿ ಒದಗಿಸುವಂತೆ ನ್ಯಾಯಾಲಯ ಸೂಚಿಸಿದೆ. ಅಲ್ಲದೇ ತನಿಖೆಗೆ ಸಹಕರಿಸಬೇಕು ಹಾಗೂ ದೂರುದಾರರನ್ನು ಸಂಪರ್ಕಿಸುವಂತಿಲ್ಲ ಎಂದು ಷರತ್ತು ವಿಧಿಸಿದೆ.

ಮಹಿಳೆಯನ್ನು ಬಂಧನದಲ್ಲಿರಿಸಿ ಕಿರುಕುಳ ನೀಡಿ, ಹಿಂಸಿಸಿದ್ದ ಆರೋಪದಲ್ಲಿ ಶಾಸಕ ಮುನಿರತ್ನ ಸೇರಿದಂತೆ ೮ ಜನರ ವಿರುದ್ಧ ಮಹಿಳೆ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಎಫ್ಐಅರ್ ದಾಖಲಾಗಿತ್ತು.

ಮಹಿಳೆಯೊಬ್ಬರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ, ಅಕ್ರಮವಾಗಿ ಬಂಧಿಸಿ ಕಿರುಕುಳ ನೀಡಿದ, ಅಪಹರಿಸಿ ಸುಲಿಗೆ ಮಾಡಿದ ಗಂಭೀರ ಆರೋಪದಡಿ ಆರ್‌ಆರ್‌ ನಗರದ ಬಿಜೆಪಿ ಶಾಸಕ ಮುನಿರತ್ನ, ಮೂವರು ಪೊಲೀಸ್‌ ಅಧಿಕಾರಿಗಳು ಹಾಗೂ ಬೆಂಬಲಿಗರ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್‌ ದಾಖಲಾಗಿದೆ.

2022-2023ರ ಅವಧಿಯಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಮುನಿರತ್ನ ಹಾಗೂ ಕೆಲವರು ಮಹಿಳೆಯೊಬ್ಬರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ, ಅಕ್ರಮವಾಗಿ ಬಂಧಿಸಿ ಕಿರುಕುಳ ನೀಡಿ ಸುಲಿಗೆ ಮಾಡಿ ಹಿಂಸಿದ ಹಿನ್ನೆಲೆಯಲ್ಲಿ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಒಳಸಂಚು ಮತ್ತು ದರೋಡೆ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಕೈಗೊಂಡಿದ್ದರು. ಮಹಿಳೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಆರ್‌ಆರ್‌ ನಗರದ ಬಿಜೆಪಿ ಶಾಸಕ ಮುನಿರತ್ನ, ಮೂವರು ಪೊಲೀಸ್‌ ಅಧಿಕಾರಿಗಳು ಹಾಗೂ ಬೆಂಬಲಿಗರ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ಶಾಸಕ ಮುನಿರತ್ನ, ಆರ್‌.ಆರ್‌. ನಗರ ಠಾಣೆ ಇನ್ಸ್‌ಪೆಕ್ಟರ್‌ಗಳಾಗಿದ್ದ ಅಯ್ಯಣ್ಣರೆಡ್ಡಿ, ಬಿ.ಎನ್‌. ಲೋಹಿತ್‌, ಪಿಎಸ್‌ಐ ಚಂದ್ರಶೇಖರ್‌, ಶಾಸಕರ ಬೆಂಬಲಿಗರಾದ ಕಿರಣ್‌ನಾಯ್ಡು, ಲೋಹಿತ್‌ಗೌಡ ಹಾಗೂ ಇತರರು ಸೇರಿ ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಶಾಸಕ ಮುನಿರತ್ನ ಹಾಗೂ ಪೊಲೀಸ್‌ ಅಧಿಕಾರಿಗಳು ಅಧಿಕಾರ ದುರ್ಬಳಕೆ ಮಾಡಿಕೊಂಡು ಒಳಸಂಚು ರೂಪಿಸಿ ಸುಳ್ಳು ಪ್ರಕರಣ ದಾಖಲಿಸಿ ಅಕ್ರಮ ಬಂಧನದಲ್ಲಿಟ್ಟು ಕಿರುಕುಳ ನೀಡಿದ್ದರು. ಅಪಹರಣ ಮಾಡಿ ಸುಲಿಗೆ ಮಾಡಿ ದೌರ್ಜನ್ಯ ಎಸಗಿದ್ದರು ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ದರೋಡೆ, ಒಳಸಂಚು ಸೇರಿದಂತೆ ಇತರ ಆರೋಪಗಳ ಅನ್ವಯ ಎಫ್‌ಐಆರ್‌ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು. ಪ್ರಕರ ಅದಾಖಲಾಗುತ್ತಿದ್ದಂತೆ ಬಂಧನ ಭೀತಿಯಲ್ಲಿದ್ದ ಮುನಿರತ್ನ ಜನಪ್ರತಿನಿಧಿಗಳ ನ್ಯಾಯಾಲಯದ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಕೋರ್ಟ್, ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular