HomeKarnatakaBIG NEWS: ಬಿಜೆಪಿ ಬಣ ಬಡಿದಾಟಕ್ಕೆ ಹೊಸ ಟ್ವಿಸ್ಟ್: ರಾಜ್ಯ ಪ್ರಧಾನಕಾರ್ಯದರ್ಶಿ ಸ್ಥಾನದಿಂದ ಬಿಡುಗಡೆಗೊಳಿಸುವಂತೆ ಶಾಸಕ...

BIG NEWS: ಬಿಜೆಪಿ ಬಣ ಬಡಿದಾಟಕ್ಕೆ ಹೊಸ ಟ್ವಿಸ್ಟ್: ರಾಜ್ಯ ಪ್ರಧಾನಕಾರ್ಯದರ್ಶಿ ಸ್ಥಾನದಿಂದ ಬಿಡುಗಡೆಗೊಳಿಸುವಂತೆ ಶಾಸಕ ಸುನೀಲ್ ಕುಮಾರ್ ಮನವಿ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಒಂದೆಡೆ ಬಣ ಬಡಿದಾಟ, ರಾಜ್ಯಾಧ್ಯಕ್ಷರ ಸ್ಥಾನ ಬದಲಾವಣೆಗಾಗಿ ಒತ್ತಾಯ ಕೇಳುಬರುತ್ತಿರುವ ನಡುವೆಯೇ ಶಾಸಕ ಸುನೀಲ್ ಕುಮಾರ್, ರಾಜ್ಯ ಪ್ರಧಾನಕಾರ್ಯದರ್ಶಿ ಹುದ್ದೆಯಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಮನವಿ ಮಾಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ ಹಾಗೂ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಪಕ್ಷದ ಹುದ್ದೆಯಿಂದ ತಮ್ಮನ್ನು ಬಿಡುಗಡೆ ಮಡುವಂತೆ ಕೋರಿದ್ದಾರೆ.

ತಮ್ಮ ನಿರ್ಧಾರಕ್ಕೆ ಬಣ ಬಡಿದಾಟ ಕಾರಣವಲ್ಲ. ವೈಯಕ್ತಿಕ ಕಾರಣಕ್ಕೆ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಬೇಕು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular