HomeKarnatakaBREAKING: ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಸಾಧ್ಯತೆ, ನನಗೆ ಅಧ್ಯಕ್ಷ ಸ್ಥಾನಕ್ಕೆ ಕೇಳಿದ್ದೇನೆ: ಕುಮಾರ್ ಬಂಗಾರಪ್ಪ

BREAKING: ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಸಾಧ್ಯತೆ, ನನಗೆ ಅಧ್ಯಕ್ಷ ಸ್ಥಾನಕ್ಕೆ ಕೇಳಿದ್ದೇನೆ: ಕುಮಾರ್ ಬಂಗಾರಪ್ಪ

ಶಿವಮೊಗ್ಗ: ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಬದಲಾಗುವ ನಿರೀಕ್ಷೆ ಇದೆ. ನನಗೆ ಅಧ್ಯಕ್ಷ ಸ್ಥಾನ ಕೊಡುವಂತೆ ಮನವಿ ಮಾಡಿದ್ದೇನೆ. ಒಬಿಸಿ ಸಮುದಾಯಕ್ಕೆ ಅಧ್ಯಕ್ಷ ಸ್ಥಾನ ನೀಡಿದರೆ ನನ್ನನ್ನು ಪರಿಗಣಿಸುವಂತೆ ಕೋರಿದ್ದೇನೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದು ಮೂವತ್ತು ವರ್ಷಗಳಿಂದ ನಾನು ರಾಜಕಾರಣದಲ್ಲಿ ಇದ್ದೇನೆ. ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ಪರಿಗಣಿಸಿ. ಒಪಿಸಿ ಸಮುದಾಯಕ್ಕೆ ಆದ್ಯತೆ ನೀಡಿದರೆ ನನ್ನನ್ನು ಪರಿಗಣಿಸಿ ಎಂದು ಹೇಳಿದ್ದೇನೆ ಎಂದರು.

ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಬದಲಾಗಬಹುದೆಂಬ ನಿರೀಕ್ಷೆ ಇದೆ. ಪಕ್ಷದಲ್ಲಿನ ಭಿನ್ನಮತದ ಬಗ್ಗೆ ವರಿಷ್ಠರು ಗಮನಹರಿಸಿದ್ದಾರೆ. ಶೀಘ್ರವಾಗಿ ಪಕ್ಷದ ಹೈಕಮಾಂಡ್ ತೀಕ್ಷ್ಣವಾದ ನಿರ್ಧಾರ ಕೈಗೊಳ್ಳಲಿದೆ. ರೇಣುಕಾಚಾರ್ಯ ಟೀಂ ಸಭೆ ನಡೆಸುತ್ತಿರುವುದು ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular