HomeKarnatakaBIG NEWS: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಚ್ಚರಿ ಆಯ್ಕೆ: ಶೋಭಾ ಕರಂದ್ಲಾಜೆ ನೇಮಕ ಸಾಧ್ಯತೆ

BIG NEWS: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಚ್ಚರಿ ಆಯ್ಕೆ: ಶೋಭಾ ಕರಂದ್ಲಾಜೆ ನೇಮಕ ಸಾಧ್ಯತೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲು ಕೊನೆಗೂ ವರಿಷ್ಠರು ನಿರ್ಧರಿಸಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ನೇಮಕ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆಗೆ ಸಿ.ಟಿ. ರವಿ, ವಿ. ಸೋಮಣ್ಣ, ಅಶ್ವತ್ಥ್ ನಾರಾಯಣ್, ಬಸವನಗೌಡ ಪಾಟೀಲ್ ಯತ್ನಾಳ್, ಬಿ.ವೈ. ವಿಜಯೇಂದ್ರ, ಸುನಿಲ್ ಕುಮಾರ್ ಅವರು ರೇಸ್ ನಲ್ಲಿದ್ದು, ಅವರಲ್ಲಿ ಒಬ್ಬರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವರಿಷ್ಠರು ಮುಂದಿನ ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲು ಚಿಂತನೆ ನಡೆಸಿದ್ದಾರೆ. ಇಂದು ಇಲ್ಲವೇ ನಾಳೆಯೊಳಗೆ ನೂತನ ಅಧ್ಯಕ್ಷರನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular