HomeKarnatakaಪಕ್ಷದ ನಾಯಕರ ವಿರುದ್ಧ ಬಹಿರಂಗ ಹೇಳಿಕೆ ನೀಡದಂತೆ ಬಿಜೆಪಿ ಶಾಸಕ ಯತ್ನಾಳ್ ಗೆ ಶಿಸ್ತು ಸಮಿತಿ...

ಪಕ್ಷದ ನಾಯಕರ ವಿರುದ್ಧ ಬಹಿರಂಗ ಹೇಳಿಕೆ ನೀಡದಂತೆ ಬಿಜೆಪಿ ಶಾಸಕ ಯತ್ನಾಳ್ ಗೆ ಶಿಸ್ತು ಸಮಿತಿ ಸೂಚನೆ

ಪಕ್ಷದ ವರ್ಚಸ್ಸಿಗೆ ಧಕ್ಕೆ ತರದಂತೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ಸೂಚನೆ ನೀಡಲಾಗಿದೆ.

ಇತ್ತೀಚೆಗೆ ಯತ್ನಾಳ್ ಅವರು ನೀಡಿದ್ದ ಹೇಳಿಕೆಯ ಬಗ್ಗೆ ರಾಜ್ಯ ಬಿಜೆಪಿಯಿಂದ ಕೇಂದ್ರೀಯ ಶಿಸ್ತು ಸಮಿತಿ ಗಮನಕ್ಕೆ ತರಲಾಗಿತ್ತು. ಹೀಗಾಗಿ ದೂರವಾಣಿಯ ಮೂಲಕ ಯತ್ನಾಳ್ ಅವರೊಂದಿಗೆ ಶಿಸ್ತು ಸಮಿತಿ ಮಾತುಕತೆ ನಡೆಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸಮಿತಿಯಿಂದ ಯತ್ನಾಳ್ ವಿರುದ್ಧ ದೂರು ನೀಡಲಾಗಿದ್ದು, ಹೈಕಮಾಂಡ್ ಅಲರ್ಟ್ ಆಗಿದೆ. ಬಿಜೆಪಿ ವರಿಷ್ಠರು ಯತ್ನಾಳ್ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ದೂರವಾಣಿ ಮೂಲಕ ಯತ್ನಾಳ್ ಜೊತೆ ಮಾತನಾಡಿದ್ದು, ಪಕ್ಷದ ಶಿಸ್ತು ಉಲ್ಲಂಘಿಸದಂತೆ ಸೂಚನೆ ನೀಡಿದ್ದಾರೆ.

ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದಲೂ ದೂರವಾಣಿ ಮೂಲಕ ಯತ್ನಾಳ್ ಅವರಿಗೆ ಸೂಚನೆ ನೀಡಲಾಗಿದ್ದು, ಪಕ್ಷದ ಶಿಸ್ತು ಉಲ್ಲಂಘಿಸಿದಂತೆ ತಿಳಿಸಿದ್ದಾರೆ. ಯತ್ನಾಳ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೇಂದ್ರಕ್ಕೆ ರಾಜ್ಯ ಬಿಜೆಪಿ ಘಟಕದಿಂದ ಶಿಫಾರಸು ಮಾಡಲಾಗಿತ್ತು. ಯತ್ನಾಳ್ ವಿರುದ್ಧ ಶಿಸ್ತು ಉಲ್ಲಂಘನೆಯ ಆರೋಪ ಮಾಡಲಾಗಿದ್ದ ಹಿನ್ನೆಲೆಯಲ್ಲಿ ಅವರಿಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಸೂಚನೆ ನೀಡಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular