BREAKING: ಸದನದ ಬಾವಿಗಿಳಿದು ಬಿಜೆಪಿ ಪ್ರತಿಭಟನೆ : ವಿಧಾನಸಭೆ ಕಲಾಪ ಮುಂದೂಡಿಕೆ

ಬೆಂಗಳೂರು: ವಿಧಾನಸಭಾ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ತೀವ್ರ ಗದ್ದಲ ಕೋಲಾಹಲ ಆರಂಭಿಸಿದ ಹಿನ್ನೆಲೆಯಲ್ಲಿ ಕಲಾಪವನ್ನು ಮುಂದೂಡಿದ ಘಟನೆ ನಡೆದಿದೆ.

ಪ್ರಶ್ನೋತ್ತರ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ಗ್ಯಾರಂಟಿ ಯೋಜನೆಗಳ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯಿಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ನಾವು ಕೊಟ್ಟ ಭರವಸೆಯನ್ನು ಗ್ಯಾರಂಟಿ ಈಡೇರಿಸುತ್ತೆವೆ. ಅನಗತ್ಯ ಗದ್ದಲ ಬೇಡ ಎಂದು ಮನವಿ ಮಾಡಿದರೂ ಬಿಜೆಪಿ ಸದಸ್ಯರು ಪಟ್ಟು ಸಡಿಲಿಸಿಲ್ಲ. ಈ ವೇಳೆ ಗರಂ ಆದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಸದಸ್ಯರು ಮೊಂಡಾಟ ಬಿಡಬೇಕು. ಇಂತಹ ಮೊಂಡಾಟದಿಂದ ಏನೂ ಪ್ರಯೋಜನವಿಲ್ಲ ಎಂದು ಹೇಳುತ್ತಿದ್ದಂತೆ ಬಿಜೆಪಿ ನಾಯಕರು ಇನ್ನಷ್ಟು ಗಲಾಟೆ ಆರಂಭಿಸಿದರು. ಮುಖ್ಯಮಂತ್ರಿಗಳು ಮೊಂಡಾಟ ಪದ ಬಳಸಿದ್ದಕ್ಕೆ ಆಕ್ರೋಶಗೊಂಡಿದ್ದು, ಸರ್ಕಾರದ ವಿರುದ್ಧ ಮುಗಿ ಬಿದ್ದರು.

ಸದನದಲ್ಲಿ ಗದ್ದಲ-ಕೋಲಾಹಲ ಆರಂಭವಾಗುತ್ತಿದ್ದಂತೆ ಸ್ಪೀಕರ್ ಖಾದರ್, ವಿಧಾನಸಭೆ ಕಲಾಪವನ್ನು 15 ನಿಮಿಷ ಮುಂದೂಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read