ಅಧಿಕೃತವಾಗಿ ಬಿಜೆಪಿ ಸೇರಲು ಸಂಸದೆ ಸುಮಲತಾ ಅಂಬರೀಶ್ ಗೆ ಆಹ್ವಾನ

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಆಹ್ವಾನಿಸಿದ್ದಾರೆ.

ಬೆಂಗಳೂರಿನ ಜೆಪಿ ನಗರದಲ್ಲಿರುವ ಸುಮಲತಾ ಅಂಬರೀಶ್ ಅವರ ನಿವಾಸಕ್ಕೆ ತೆರಳಿದ ವಿಜಯೇಂದ್ರ ಸುದೀರ್ಘ ಸಮಾಲೋಚನೆ ನಡೆಸಿ ಪಕ್ಷಕ್ಕೆ ಆಹ್ವಾನ ನೀಡಿದ್ದಾರೆ. ಆದರೆ, ತಮ್ಮ ನಿಲುವು ಸ್ಪಷ್ಟಪಡಿಸದ ಸುಮಲತಾ ಅಂಬರೀಶ್ ಶನಿವಾರ ಬೆಂಬಲಿಗರೊಂದಿಗೆ ಚರ್ಚೆ ನಡೆಸಿ ಮಂಡ್ಯದಲ್ಲಿಯೇ ಮುಂದಿನ ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ವಿಜಯೇಂದ್ರ, ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸುವುದು ನಮ್ಮೆಲ್ಲರ ಗುರಿಯಾಗಿದ್ದು, ಈ ನಿಟ್ಟಿನಲ್ಲಿ ತಮ್ಮ ಸ್ವಾಭಿಮಾನದ ಬೆಂಬಲವನ್ನು ಮೋದಿ ಅವರಿಗಾಗಿ ಸಮರ್ಪಿಸಬೇಕೆಂದು ವಿನಂತಿಸಲಾಯಿತು. ಅತ್ಯಂತ ಪೂರಕವಾಗಿ ಸ್ಪಂದಿಸಿರುವ ಸುಮಲತಾ ಅವರು ತಮ್ಮ ಬೆಂಬಲಿಗರು ಹಾಗೂ ಅಭಿಮಾನಿಗಳೊಂದಿಗೆ ಚರ್ಚಿಸಿ ಸಕಾರಾತ್ಮಕ ನಿರ್ಧಾರವನ್ನು ಪ್ರಕಟಿಸುವುದಾಗಿ ಭರವಸೆ ನೀಡಿದರು ಎಂದು ತಿಳಿಸಿದ್ದಾರೆ.

https://twitter.com/BYVijayendra/status/1773719165633024300

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read