ಈಶ್ವರಪ್ಪ, ಶೆಟ್ಟರ್ ಸೇರಿ 35 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಸಸ್ಪೆನ್ಸ್

ಬೆಂಗಳೂರು: ಆಡಳಿತರೂಢ ಬಿಜೆಪಿ ವಿಧಾನಸಭೆ ಚುನಾವಣೆಗೆ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ. ಪಟ್ಟಿಯಲ್ಲಿ ಸಚಿವ ಎಸ್. ಅಂಗಾರ ಸೇರಿದಂತೆ 9 ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪಿದೆ. 35 ಕ್ಷೇತ್ರಗಳಿಗೆ ಎರಡನೇ ಪಟ್ಟಿಯಲ್ಲಿ ಅಭ್ಯರ್ಥಿಗಳನ್ನು ಪ್ರಕಟಿಸುವ ನಿರೀಕ್ಷೆ ಇದೆ.

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪ್ರತಿನಿಧಿಸುವ ಹುಬ್ಬಳ್ಳಿ ಸೆಂಟ್ರಲ್, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಪ್ರತಿನಿಧಿಸುವ ಶಿವಮೊಗ್ಗ ನಗರ. ಅರವಿಂದ ಲಿಂಬಾವಳಿ ಪ್ರತಿನಿಧಿಸುವ ಮಹದೇವಪುರ ಕ್ಷೇತ್ರ ಸೇರಿದಂತೆ 35 ಕ್ಷೇತ್ರಗಳಿಗೆ ಇನ್ನೂ ಟಿಕೆಟ್ ಘೋಷಣೆಯಾಗಿಲ್ಲ.

ಜಗದೀಶ್ ಶೆಟ್ಟರ್ ವರಿಷ್ಠರ ಭೇಟಿಗೆ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಕೆ.ಎಸ್. ಈಶ್ವರಪ್ಪ ನಿವೃತ್ತಿ ಘೋಷಿಸಿದ್ದಾರೆ. ಗೋವಿಂದರಾಜನಗರ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಸಚಿವ ಸೋಮಣ್ಣ ಅವರಿಗೆ ವರುಣಾ ಮತ್ತು ಚಾಮರಾಜನಗರದಲ್ಲಿ ಟಿಕೆಟ್ ನೀಡಲಾಗಿದೆ.

ರಾಮದಾಸ್ ಪ್ರತಿನಿಧಿಸುತ್ತಿದ್ದ ಕೃಷ್ಣರಾಜ, ಅರವಿಂದ ಲಿಂಬಾವಳಿ ಪ್ರತಿನಿಧಿಸುವ ಮಹದೇವಪುರ, ನೆಹರು ಓಲೆಕಾರ್ ಪ್ರತಿನಿಧಿಸುವ ಹಾವೇರಿ, ಎಂ.ಪಿ. ಕುಮಾರಸ್ವಾಮಿ ಶಾಸಕರಾಗಿರುವ ಮೂಡಿಗೆರೆ, ಪರಣ್ಣ ಮುನವಳ್ಳಿ ಶಾಸಕರಾಗಿರುವ ಗಂಗಾವತಿ, ಕಳಕಪ್ಪ ಬಂಡಿ ಶಾಸಕರಾಗಿರುವ ರೋಣ, ಸುಕುಮಾರ ಶೆಟ್ಟಿ ಶಾಸಕರಾಗಿರುವ ಬೈಂದೂರು ವಿಧಾನಸಭಾ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾಗಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read