HomeKarnatakaBREAKING NEWS: ಕೈತಪ್ಪಿದ ಟಿಕೆಟ್: ಬಿಜೆಪಿಯಲ್ಲಿ ಭುಗಿಲೆದ್ದ ಆಕ್ರೋಶ; ಸಂಗಣ್ಣ ಕರಡಿ ಬೆಂಬಲಿಗರಿಂದ ಬಿಜೆಪಿ ಕಚೇರಿ...

BREAKING NEWS: ಕೈತಪ್ಪಿದ ಟಿಕೆಟ್: ಬಿಜೆಪಿಯಲ್ಲಿ ಭುಗಿಲೆದ್ದ ಆಕ್ರೋಶ; ಸಂಗಣ್ಣ ಕರಡಿ ಬೆಂಬಲಿಗರಿಂದ ಬಿಜೆಪಿ ಕಚೇರಿ ಮೇಲೆ ಕಲ್ಲುತೂರಾಟ

ಕೊಪ್ಪಳ: ಬಿಜೆಪಿಯಲ್ಲಿ ಹಾಲಿ 8 ಸಂಸದರಿಗೆ ಲೋಕಸಭಾ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಕೊಪ್ಪಳ ಜಿಲ್ಲಾ ಬಿಜೆಪಿ ಘಟಕದಲ್ಲಿ ಆಕ್ರೋಶ ಭುಗಿಲೆದ್ದಿದೆ. ಸಂಗಣ್ಣ ಕರಡಿ ಬದಲಾಗಿ ಡಾ.ಕೆ.ಬಸವರಾಜ್ ಗೆ ಟಿಕೆಟ್ ನೀಡಿರುವ ಹಿನ್ನೆಲೆಯಲ್ಲಿ ಸಂಗಣ್ಣ ಕರಡಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ಕೊಪ್ಪಳ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ನಾಯಕರು ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಬಿಜೆಪಿ ಕಚೇರಿಗೆ ನುಗ್ಗಿದ ಸಂಗಣ್ಣ ಕರಡಿ ಬೆಂಬಲಿಗರು, ನ್ಯಾಯ ಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಕೆಲ ಬೆಂಬಲಿಗರು ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬಿಜೆಪಿ ಕಚೇರಿಯ ಗಾಜು ಪುಡಿಪುಡಿಯಾಗಿದ್ದು, ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular