ಬರಗಾಲದಲ್ಲಿ ಮಜವಾದಿ ಸಿದ್ಧರಾಮಯ್ಯ, ಜಮೀರ್ ಆಡಂಬರಕ್ಕೇನೂ ಕಡಿಮೆ ಇಲ್ಲ: ಐಷಾರಾಮಿ ವಿಮಾನ ಪ್ರಯಾಣಕ್ಕೆ ಬಿಜೆಪಿ ಟೀಕೆ

ಬೆಂಗಳೂರು: ಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ ಒಳಗೆ ಮೋಜು ಮಸ್ತಿ ಮಾಡುತ್ತಾ ಮಜವಾದಿ ಮುಖ್ಯಮಂತ್ರಿ ನಾಡಿನ ಬಡವರನ್ನು ಅಣುಕಿಸುತ್ತಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.

ದೆಹಲಿಯಿಂದ ಬೆಂಗಳೂರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಐಷಾರಾಮಿ ವಿಮಾನದಲ್ಲಿ ಆಗಮಿಸಿದ ಬಗ್ಗೆ ರಾಜ್ಯ ಬಿಜೆಪಿ ಘಟಕದಿಂದ ಟ್ವೀಟ್ ಮಾಡಲಾಗಿದೆ.

ರಾಜ್ಯದಲ್ಲಿ ತೀವ್ರ ಬರ ಬಂದು ಜನತೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನರಳುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಆರು ತಿಂಗಳು ಮುಗಿದರೂ ಒಂದೇ ಒಂದು ಗುಂಡಿ ಮುಚ್ಚುವ ಕಾಮಗಾರಿ ಕೂಡ ನಡೆದಿಲ್ಲ. ಆದರೆ, ಮಜವಾದಿ ಸಿದ್ಧರಾಮಯ್ಯ ಮತ್ತು ಅವರ ಅತ್ಯಾಪ್ತ ಜಮೀರ್ ಅಹ್ಮದ್ ಅವರ ಆಡಂಬರಕ್ಕೇನು ಕಡಿಮೆ ಇಲ್ಲ. ಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ ಒಳಗೆ ಮೋಜು ಮಸ್ತಿ ಮಾಡುತ್ತಾ ಮಜವಾದಿ ಮುಖ್ಯಮಂತ್ರಿ ನಾಡಿನ ಬಡವರನ್ನು ಅಣುಕಿಸುತ್ತಿರುವುದಕ್ಕೆ ಈ ಅವತಾರವೇ ಸಾಕ್ಷಿ ಎಂದು ಹೇಳಲಾಗಿದೆ.

https://twitter.com/BJP4Karnataka/status/1737823742578110650

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read