BIG NEWS: ರಾಷ್ಟ್ರಭಕ್ತ ಸ್ವಯಂಸೇವಕರ ಮೇಲೆ ದೌರ್ಜನ್ಯ ಕಾಂಗ್ರೆಸ್ಸಿನ ಹಿಟ್ಲರ್ ರಾಜಕಾರಣಕ್ಕೆ ಹಿಡಿದ ಕೈಗನ್ನಡಿ: ಬಿಜೆಪಿ ಕಿಡಿ

ಬೆಂಗಳೂರು: ಮಂಡ್ಯ ಜಿಲ್ಲೆಯ ಪಾಂಡವಪುರದ ಆರ್‌ಎಸ್‌ಎಸ್ ಕಾರ್ಯಾಲಯಕ್ಕೆ ರಾತ್ರೋರಾತ್ರಿ ಪೊಲೀಸರು ನುಗ್ಗಿ, ಸಂಘದ ಪ್ರಚಾರಕರ ಮೇಲೆ ದೌರ್ಜನ್ಯ ನಡೆಸಿದ್ದು ಅಕ್ಷಮ್ಯ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ.

ಸಂಘದ ಕಾರ್ಯಾಲಯಕ್ಕೆ ಸಕಾರಣವಿಲ್ಲದೆ ದಾಳಿ ನಡೆಸಿದ ಘಟನೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅರಾಜಕತೆ ಹೆಚ್ಚಾಗಿದ್ದು, ಹಿಂದೂಗಳನ್ನು ಭಯದ ವಾತಾವರಣದಲ್ಲಿ ಬದುಕುವಂತೆ ಮಾಡುವ ಸನ್ನಿವೇಶ ಸೃಷ್ಟಿಸುತ್ತಿದೆ ಎಂದು ವಾಗ್ದಾಳಿ ನಡೆಸಿದೆ

ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಸಮಾಜದಲ್ಲಿ ಅಸ್ಥಿರತೆ ಮೂಡಿಸಲು ಕಾಂಗ್ರೆಸ್ ಯತ್ನಿಸುತ್ತಿದೆ. ಹಿಂದೂಗಳಿಗೆ ಬಹಿರಂಗ ಸವಾಲು ಎಸೆಯುವ ಮತಾಂಧರನ್ನು ಸ್ವತಂತ್ರವಾಗಿರಲು ಬಿಟ್ಟು, ರಾಷ್ಟ್ರಭಕ್ತ ಸ್ವಯಂಸೇವಕರ ಮೇಲೆ ದೌರ್ಜನ್ಯ ನಡೆಸುತ್ತಿರುವುದು ಕಾಂಗ್ರೆಸ್ಸಿನ ಹಿಟ್ಲರ್ ರಾಜಕಾರಣಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read