ಓಲೈಕೆ ರಾಜಕಾರಣಕ್ಕಾಗಿ ಪೊಲೀಸರ “ಕೈ” ಕಟ್ಟಿಹಾಕಿದ ಕಾಂಗ್ರೆಸ್ ಸರ್ಕಾರ; BJP ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಪೊಲೀಸರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ರಾಜ್ಯ ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ, ರೈಲಿನಲ್ಲಿ ಪೊಲೀಸ್ ಸಿಬ್ಬಂದಿಗೆ ಚಾಕು ಇರಿತ, ಅಕ್ರಮ ಮರಳು ಮಾಫಿಯಾಗೆ ಪೊಲಿಸ್ ಕಾನ್ಸ್ ಟೇಬಲ್ ಬಲಿ, ಪೊಲೀಸ್ ಮೇಲೆ ಮಚ್ಚು ಬೀಸಿದ ಕಳ್ಳ, ಸಂಚಾರಿ ಪೊಲೀಸ್ ಪೇದೆ ಮೇಲೆ ಕಾರು ಚಾಲಕನಿಂದ ಹಲ್ಲೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳನ್ನು ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ ಸರ್ಕಾರದ ವಿರುದ್ಧ ಕಿಡಿಕಾರಿದೆ.

ಓಲೈಕೆ ರಾಜಕಾರಣಕ್ಕಾಗಿ ಕಾಂಗ್ರೆಸ್ ಸರ್ಕಾರ ಪೊಲೀಸರ “ಕೈ” ಕಟ್ಟಿಹಾಕಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬಂದಾಗಿನಿಂದ ಆರಕ್ಷಕರಿಗೆ ರಕ್ಷಣೆ ಎಂಬುದು ಗಗನಕುಸುಮವಾಗಿದೆ. ಮತಾಂಧರು ಪೊಲೀಸರನ್ನು ಹಾಗೂ ಪೊಲೀಸ್ ಠಾಣೆಯನ್ನು ಗುರಿಯಾಗಿಸಿಕೊಂಡು ನಡೆಸುತ್ತಿರುವ ಹಲ್ಲೆಗಳಿಗೆ ಮಿತಿಯೇ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read