HomeKarnatakaBIG NEWS: ಗಣೇಶ ಮೂರ್ತಿಯನ್ನೇ ಬಂಧಿಸಿದ ಪೊಲೀಸರು: ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಂತೆ ಎಂದು ಸರ್ಕಾರದ...

BIG NEWS: ಗಣೇಶ ಮೂರ್ತಿಯನ್ನೇ ಬಂಧಿಸಿದ ಪೊಲೀಸರು: ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಂತೆ ಎಂದು ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಬೆಂಗಳೂರು: ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಂತೆ ಕಾಂಗ್ರೆಸ್ ಸರ್ಕಾರ ರಾಹು ಕಾಲಕ್ಕೆ ಗಣೇಶ ಮೂರ್ತಿಗಳನ್ನು ಬಂಧಿಸಿದೆ ಎಂದು ರಾಜ್ಯ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ಅದೆಷ್ಟರಮಟ್ಟಿಗೆ ಲಜ್ಜೆ ಬಿಟ್ಟು ನಿಂತಿದೆ ಎನ್ನುವುದಕ್ಕೆ ಗಣೇಶ ಮೂರ್ತಿಯನ್ನೇ ಬಂಧಿಸಿ ಪೊಲೀಸ್ ವಾಹನದಲ್ಲಿ ತೆಗೆದುಕೊಂಡು ಹೋಗುತ್ತಿರುವುದೇ ಸಾಕ್ಷಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರಿದೆ.

ಇಷ್ಟು ದಿನ ಹಿಂದೂಗಳ ಮೇಲೆ ದಾಳಿ ಮಾಡಿಸುವುದು, ಹಿಂದೂಗಳ ಭೂಮಿ ಕಬಳಿಸುವುದು, ಹಿಂದೂಗಳ‌ನ್ನು ಬಂಧಿಸುವುದು, ಹಿಂದೂಗಳನ್ನು ಹತ್ತಿಕ್ಕುತ್ತಿದ್ದ ಭ್ರಷ್ಟ ಸಿಎಂ ಸಿದ್ದರಾಮಯ್ಯ ಅವರು ಗಣೇಶ ಮೂರ್ತಿಗಳನ್ನೇ ಬಂಧಿಸಿರುವುದು “ರಾಹು ಕಾಲ” ಶೀಘ್ರದಲ್ಲೇ ಕೊನೆಯಾಗಲಿದೆ ಎಂಬುದರ ಮುನ್ಸೂಚನೆ ಎಂದು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular