HomeKarnatakaBIG NEWS: ಕಳ್ಳನ ಮನಸ್ಸು ಹುಳ್ಳುಳ್ಳಗೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವಾಗ್ದಾಳಿ

BIG NEWS: ಕಳ್ಳನ ಮನಸ್ಸು ಹುಳ್ಳುಳ್ಳಗೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ಸಿಬಿಐ ಮುಕ್ತ ತನಿಖೆಗೆ ಇದ್ದ ಅಧಿಸೂಚನೆಯನ್ನು ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧಾರ ವಿಚಾರವಾಗಿ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ‘ಕಳ್ಳನ ಮನಸ್ಸು ಹುಳ್ಳುಳ್ಳಗೆ’ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದೆ.

ಸಿಬಿಐ ತನಿಖಾ ದಳಕ್ಕೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆಯನ್ನು ವಾಪಾಸ್ ಪಡೆಯುವ ಮೂಲಕ ಸಿಬಿಐಗೆ ರಾಜ್ಯದಲ್ಲಿ ಅಂಕುಶ ಹಾಕಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಇದೇ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಸಿಎಂ ಸಿದ್ದರಾಮಯ್ಯ ಅವರ ಕಾಲೆಳೆದಿದೆ. “ಕಳ್ಳನ ಮನಸ್ಸು ಹುಳ್ಳುಳ್ಳಗೆ” ಯಾವುದೇ ತನಿಖೆಗಾದರೂ ಸಿದ್ದ ಎಂದು ಬೊಗಳೆ ಬಿಟ್ಟಿದ್ದ ಭಂಡ ಸಿದ್ದರಾಮಯ್ಯ ಅವರು ಈಗ ರಾಜ್ಯದಲ್ಲಿ ಸಿಬಿಐನ ಸ್ವತಂತ್ರ ತನಿಖೆಗೆ ಅಡ್ಡಗಾಲು ಹಾಕುವ ನಿರ್ಧಾರವನ್ನು ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಪ್ಪು ಮಾಡಿಲ್ಲ ಎಂದ ಮೇಲೆ ತನಿಖೆ ಎದುರಿಸಲು ಸಿದ್ದರಾಮಯ್ಯ ಅವರಿಗೆ ಭಯ ಏಕೆ ಎಂದು ತಿಳಿಸುವಿರಾ ಕಾಂಗ್ರೆಸ್..?? ಎಂದು ಪ್ರಶ್ನಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular