ಬೆಂಗಳೂರು : ನಾರಿಯರನ್ನು ‘ಮಾರಿ’ ಎಂದ ಬಿಜೆಪಿ ಮಹಿಳೆಯರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
“ಮಾರಿ“ ಎಂದರೆ ಏನರ್ಥ ? ಮಹಿಳೆಯರನ್ನು ಘನತೆ, ಗೌರವದ ದೃಷ್ಟಿಯಲ್ಲಿ ನೋಡಲು ಬಿಜೆಪಿಗೆ ಸಾಧ್ಯವಿಲ್ಲವೇಕೆ? ಮಹಿಳೆಯರನ್ನು “ಮಾರಿ” ಎನ್ನುವ ಮೂಲಕ ಬಿಜೆಪಿ ತನ್ನೊಳಗಿನ ವಿಷಕಾರಿ ಮನಸ್ಥಿತಿಯನ್ನು ಬಹಿರಂಗಪಡಿಸಿದೆ. ಸ್ತ್ರೀಯರ ಗೌರವಕ್ಕೆ ಚ್ಯುತಿ ತಂದ ಬಿಜೆಪಿ ನಾಡಿನ ಸಮಸ್ತ ಮಹಿಳೆಯರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಆಗ್ರಹಿಸಿದೆ
ಒಂದು ಗ್ರಾಮ ಪಂಚಾಯ್ತಿ ಎಲೆಕ್ಷನ್ ನಿಂತು ಗೆಲ್ಲಲಾಗದವರು ಇಡೀ ಬಿಜೆಪಿಯನ್ನು ಹಿಡಿತಕ್ಕೆ ಪಡೆದು ಕುಣಿಸುತ್ತಿದ್ದಾರೆ! ರೇಣುಕಾಚಾರ್ಯ ಅವರು ಹೇಳಿದ ಗ್ರಾ.ಪಂ ಚುನಾವಣೆಗೂ ನಿಲ್ಲಲಾಗದ ಆ ನಾಯಕ ಯಾರು? ದಮ್ಮು ತಾಕತ್ತಿದ್ದರೆ ಬಿಜೆಪಿ ಆ ದೊಣ್ಣೆನಾಯಕನ ಹೆಸರು ಹೇಳಲಿ! ಬಿಜೆಪಿ ಈಗ ಆತ್ಮವಿಮರ್ಶೆ ಮಾಡಿಕೊಳ್ಳುತ್ತಿದೆಯೋ ಆತ್ಮಹತ್ಯೆ ವಿಮರ್ಶೆ ಮಾಡಿಕೊಳ್ಳುತ್ತಿದೆಯೇ ಎಂಬ ಅನುಮಾನ ಶುರುವಾಗಿದೆ ಎಂದು ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಬಿಜೆಪಿ ಕಾಲೆಳೆದಿದೆ.
https://twitter.com/INCKarnataka/status/1674334538703437824?ref_src=twsrc%5Egoogle%7Ctwcamp%5Eserp%7Ctwgr%5Etweet
https://twitter.com/INCKarnataka/status/1674352780595822593?ref_src=twsrc%5Egoogle%7Ctwcamp%5Eserp%7Ctwgr%5Etweet