HomeIndiaಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆರೋಗ್ಯ ಸ್ಥಿರ

ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆರೋಗ್ಯ ಸ್ಥಿರ

ನವದೆಹಲಿ: ಬಿಜೆಪಿ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ(96) ಮತ್ತೆ ಅಸ್ವಸ್ಥರಾಗಿದ್ದು, ದೆಹಲಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಚಿಕಿತ್ಸೆ ಬಳಿಕ ಅವರ ಆರೋಗ್ಯ ಸ್ಥಿರವಾಗಿದೆ.

ಕಳೆದ ಜುಲೈ ಮೊದಲ ವಾರದಲ್ಲಿಯೂ ಅಡ್ವಾಣಿಯವರ ಆರೋಗ್ಯ ಹದಗೆಟ್ಟಿದ್ದು, ಈ ಸಂದರ್ಭದಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಅದಕ್ಕಿಂತ ಮೊದಲು ಏಮ್ಸ್ ನಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದರು. ಮಂಗಳವಾರ ಮತ್ತೆ ತೀವ್ರ ಬಳಲಿಕೆ ಹಿನ್ನೆಲೆಯಲ್ಲಿ ಅವರನ್ನು ಇಂದ್ರಪ್ರಸ್ಥ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಅವರಿಗೆ ಚಿಕಿತ್ಸೆ ನೀಡಿದ್ದು, ನಿಗಾ ವಹಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular