HomeKarnatakaBIG NEWS: ಬಿಜೆಪಿ ವಿಜಯೋತ್ಸವದ ವೇಳೆ ಚಾಕು ಇರಿತ; ಮೂವರು ಪೊಲೀಸ್ ವಶಕ್ಕೆ

BIG NEWS: ಬಿಜೆಪಿ ವಿಜಯೋತ್ಸವದ ವೇಳೆ ಚಾಕು ಇರಿತ; ಮೂವರು ಪೊಲೀಸ್ ವಶಕ್ಕೆ

ಮಂಗಳೂರು: ನರೇಂದ್ರ ಮೋದಿಯವರು ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಬೆನ್ನಲ್ಲೇ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸುತ್ತಿದ್ದ ವೇಳೆ ಅನ್ಯಕೋಮಿನ ಗುಂಪೊಂದು ಇಬ್ಬರಿಗೆ ಚಾಕು ಇರುದ ಘಟನೆ ನಡೆದಿದೆ.

ಹರೀಶ್ (41) ಹಾಗೂ ನಂದಕುಮಾರ್ (24) ಗೆ ಚಾಕು ಇರಿಯಲಾಗಿದ್ದು, ಮತ್ತೋರ್ವ ಕೃಷ್ಣಕುಮಾರ್ ಎಂಬಾತನ ಮೇಲೆ ಮನಬಂದಂತೆ ಹಲ್ಲೆ ನಡೆಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕರಣ ದಾಖಲಿಸ್ಕೊಂಡಿರುವ ಕೊಣಾಜೆ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರು ಎಂಬಲ್ಲಿ ಬಿಜೆಪಿ ವಿಜಯೋತ್ಸವ ಮೆರವಣಿಗೆಯನ್ನು ಕಾರ್ಯಕರ್ತರು ಹಮ್ಮಿಕೊಂಡಿದ್ದರು. ವಿಜಯೋತ್ಸವ ಮುಗಿಸಿ ನಿಂತಿದ್ದ ಜನರ ಮೇಲೆ ದುಷ್ಕರ್ಮಿಗಳ ತಂಡ ಏಕಾಏಕಿ ದಾಳಿ ನಡೆಸಿ ಚಾಕು ಇರಿದಿದೆ. ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರನ್ನು ನಿಯೋಜಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular