ಬಿಜೆಪಿ ವಿಜಯೋತ್ಸವದ ವೇಳೆ ಚೂರಿ ಇರಿತ ಪ್ರಕರಣ: 6 ಆರೋಪಿಗಳು ಅರೆಸ್ಟ್; 20 ಜನರು ವಶಕ್ಕೆ

ಮಂಗಳೂರು: ಬಿಜೆಪಿ ವಿಜಯೋತ್ಸವ ಮೆರವಣಿಗೆ ವೇಳೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷ್ನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

ಸಿಸಿಟಿವಿ ವಿಡಿಯೋ ಆಧರಿಸಿ 20 ಜನರನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ಸಂಬಂಧ 6 ಜನರನ್ನು ಬಂಧಿಸಲಾಗಿದೆ. ಮೂರು ಪೊಲೀಸ್ ತಂಡದಿಂದ ತನಿಖೆ ನಡೆಯುತ್ತಿದೆ. ಇನ್ನುಳಿದವರ ಬಂಧನ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಮೆರವಣಿಗೆ ಬಳಿಕ ಮೂರು ಮಂದಿ ಮಸೀದಿ ಮುಂದೆ ಘೋಷಣೆ ಕೂಗಿದ್ದಾರೆ. ಬಳಿಕ ಅವರ ಮೇಲೆ ಹಲ್ಲೆ ನ್ಡೆಸಲಾಗಿದೆ. ಆರೋಪಿಗಳಲ್ಲಿ ಒಬ್ಬ ರೌಡಿಶೀಟರ್ ಆಗಿದ್ದು, ಆತ ಚೂರು ಇಟ್ಟುಕೊಂಡಿದ್ದ. ಭಾರತ್ ಮಾತಾ ಕೀ ಜೈ ಘೋಷಣೆಗೂ ಮೊದಲು ಬೇರೆ ಪ್ರಚೋದನಕಾರಿ ಘೋಷಣೆ ಕೂಗಿದ್ದರು. ಮುಂದಿನ ದಿನಗಳಲ್ಲಿ ಎಲ್ಲಾ ಠಾಣೆಗಳಲ್ಲಿ ಎಲ್ಲಾ ಧರ್ಮದ ಪ್ರಮುಖರನ್ನು ಕರೆದು ಶಾಂತಿ ಸಭೆ ನಡೆಸುತ್ತೇವೆ. ಸಾಮಾಜಿಕ ಜಾಲತಾಣಗಳ ಮೇಲೂ ನಿಗಾ ವಹಿಸಲಾಗುವುದು ಎಂದು ತಿಳಿಸಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read