HomeKarnatakaಬಿಜೆಪಿಗೆ ಮತ ಹಾಕಿ ಫೋಟೋ ಹರಿಬಿಟ್ಟ ಪಾಲಿಕೆ ಸದಸ್ಯನ ವಿರುದ್ಧ ಎಫ್ಐಆರ್

ಬಿಜೆಪಿಗೆ ಮತ ಹಾಕಿ ಫೋಟೋ ಹರಿಬಿಟ್ಟ ಪಾಲಿಕೆ ಸದಸ್ಯನ ವಿರುದ್ಧ ಎಫ್ಐಆರ್

ಬಳ್ಳಾರಿ: ಮತದಾನದ ಗೌಪ್ಯತೆ ಕಾಪಾಡಿಕೊಳ್ಳದ ಬಳ್ಳಾರಿ ಮಹಾನಗರ ಪಾಲಿಕೆ ಸದಸ್ಯನ ವಿರುದ್ಧ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಬಳ್ಳಾರಿ ಮಹಾನಗರ ಪಾಲಿಕೆಯ ಹತ್ತನೇ ವಾರ್ಡ್ ಬಿಜೆಪಿ ಸದಸ್ಯ ಕೋನಂಕಿ ತಿಲಕ್ ಚುನಾವಣೆಯ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಅವರು ಬಿಜೆಪಿಗೆ ಮತ ಹಾಕಿರುವ ಫೋಟೋ ಕ್ಲಿಕ್ಕಿಸಿಕೊಂಡು ಅದನ್ನು ವಾಟ್ಸಾಪ್ ಸ್ಟೇಟಸ್ ಗೆ ಹಾಕಿದ್ದಾರೆ. ಶ್ರೀರಾಮುಲುಗೆ ಮತ ಹಾಕಿರುವೆ ಎಂದು ಅವರು ಬರದುಕೊಂಡಿದ್ದು, ಚುನಾವಣೆ ಫ್ಲೈಯಿಂಗ್ ಸ್ಕ್ವಾಡ್ ದೂರು ಹಿನ್ನೆಲೆಯಲ್ಲಿ ಬಳ್ಳಾರಿ ನಗರದ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular