BIG NEWS: ‘ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆ’; ಕೇಸ್ ದಾಖಲಿಸಿದ ಕಾಂಗ್ರೆಸ್

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಗುರಿಯಾಗಿಸಿಕೊಂಡು ‘ಸಿದ್ದು ನಿಜ ಕನಸುಗಳು’ ಎಂಬ ಪುಸ್ತಕವನ್ನು ಇಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಬಿಡುಗಡೆ ಮಾಡುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಪುಸ್ತಕ ಬಿಡುಗಡೆ ಕಾರ್ಯಕ್ರಮವವನ್ನು ರದ್ದು ಮಾಡುವಂತೆ ಕಾಂಗ್ರೆಸ್ ವಕ್ತಾರ ಸೂರ್ಯ ಮುಕುಂದರಾಜ್ ಎಸ್.ಜೆ.ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಸಿದ್ದು ನಿಜ ಕನಸುಗಳು ಪುಸ್ತಕಕ್ಕೆ ಅಂದಿನ ಟಿಪ್ಪು ಈಗಿನ ಸಿದ್ದುವೇ? ಎಂಬ ಹಿಂಬರಹ ನೀಡುವ ಮೂಲಕ ಸಿದ್ದರಾಮಯ್ಯ ತೇಜೋವಧೆ ಮಾಡಲಾಗುತ್ತಿದೆ. ಹೀಗಾಗಿ ಪುಸ್ತಕ ಬಿಡುಗಡೆಗೆ ಅವಕಾಶ ಕೊಡಬಾರದು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read