BREAKING: ರಾಜ್ಯದಲ್ಲಿ ಈ ಬಾರಿಯೂ ಬಿಜೆಪಿ ಪ್ರಾಬಲ್ಯ: 18 -22 ಕ್ಷೇತ್ರಗಳಲ್ಲಿ ಗೆಲುವು: ಇಂಡಿಯಾ ಟಿವಿ- ಸಿಎನ್‌ಎಕ್ಸ್ ಸಮೀಕ್ಷೆ

ನವದೆಹಲಿ: ವಿವಿಧ ವಾಹಿನಿಗಳು, ಸಂಸ್ಥೆಗಳು ಮತದಾನೋತ್ತರ ಸಮೀಕ್ಷೆ ಮಾಹಿತಿ ಪ್ರಕಟಿಸಿದ್ದು, ಕರ್ನಾಟಕದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗಳಿಸಲಿದೆ

ಇಂಡಿಯಾ ಟಿವಿ- ಸಿಎನ್‌ಎಕ್ಸ್‌ನ ಸಮೀಕ್ಷೆಯು ರಾಜ್ಯದಲ್ಲಿ ಬಿಜೆಪಿ ತನ್ನ ಪ್ರಾಬಲ್ಯವನ್ನು ಮುಂದುವರೆಸುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಬಿಜೆಪಿ 18 ರಿಂದ 22 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ. ಕಾಂಗ್ರೆಸ್ 4-8 ಸ್ಥಾನಗಳನ್ನು ಗೆಲ್ಲಲಿದೆ. ಲೋಕಸಭೆ ಚುನಾವಣೆಯಲ್ಲಿ ಮೂರನೇ ಸ್ಥಾನದಲ್ಲಿ ಜೆಡಿಎಸ್ 1 ಸ್ಥಾನ ಗೆಲ್ಲುವ ಸಾಧ್ಯತೆ ಇದೆ.

ಟಿವಿ9 ಪೋಲ್ ಸ್ಟಾರ್ಟ್ ಪೀಪಲ್ ಇನ್ ಸೈಟ್ ಸಮೀಕ್ಷೆ ಪ್ರಕಾರ ಕರ್ನಾಟಕದ 28 ಕ್ಷೇತ್ರಗಳ ಪೈಕಿ ಬಿಜೆಪಿ 18, ಜೆಡಿಎಸ್ 2, ಕಾಂಗ್ರೆಸ್ ಗೆ 8 ಸ್ಥಾನ ಗಳಿಸುವ ಸಾಧ್ಯತೆ ಇದೆ.

ಕಸಭೆ ಚುನಾವಣೆ 7 ಹಂತಗಳಲ್ಲಿ ಮುಕ್ತಾಯಗೊಂಡಿದೆ. ಮತದಾರರು ತಮ್ಮ ಹಕ್ಕು ಚಲಾಯಿಸುವ ಮೂಲಕ ತೀರ್ಪು ನೀಡಿದ್ದು, ಭಾರತೀಯ ಚುನಾವಣಾ ಆಯೋಗವು ಜೂನ್ 4 ರಂದು ಅಂತಿಮ ಫಲಿತಾಂಶವನ್ನು ಪ್ರಕಟಿಸಲಿದೆ. ಸಮೀಕ್ಷೆಯೇ ಸತ್ಯವಲ್ಲ, ನಿಖರ ಮಾಹಿತಿ ತಿಳಿಯಲು ಜೂ. 4ರವರೆಗೆ ಕಾಯಬೇಕಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read