HomeKarnatakaಹಾಡಹಗಲೇ ಬಿಜೆಪಿ ಕಾರ್ಯಕರ್ತನನ್ನು ಅಟ್ಟಾಡಿಸಿ ಹೊಡೆದ ಪಕ್ಷದ ಮುಖಂಡ

ಹಾಡಹಗಲೇ ಬಿಜೆಪಿ ಕಾರ್ಯಕರ್ತನನ್ನು ಅಟ್ಟಾಡಿಸಿ ಹೊಡೆದ ಪಕ್ಷದ ಮುಖಂಡ

ಹಾಸನ: ಹಾಡಹಗಲೇ ಬಿಜೆಪಿ ಕಾರ್ಯಕರ್ತನನ್ನು ಪಕ್ಷದ ಮುಖಂಡ ಅಟ್ಟಾಡಿಸಿ ಹೊಡೆದ ಘಟನೆ ಹಾಸನ ಜಿಲ್ಲೆ ಅರಸೀಕೆರೆ ನಗರಸಭೆ ಎದುರು ನಡೆದಿದೆ.

ಬಿಜೆಪಿ ಕಾರ್ಯಕರ್ತ ಕುಮಾರ್ ಮೇಲೆ ಹಲ್ಲೆ ಮಾಡಲಾಗಿದೆ. ಸ್ವಪಕ್ಷಿಯ ಕಾರ್ಯಕರ್ತನನ್ನು ಬಿಜೆಪಿ ಮುಖಂಡ ಸಹಚರರೊಂದಿಗೆ ಅಟ್ಟಾಡಿಸಿ ಹೊಡೆದಿದ್ದಾರೆ. ಕಾರ್ ಚಾಲಕ ಮತ್ತು ಬೆಂಬಲಿಗರ ಜೊತೆ ಸೇರಿ ಲಾಠಿಯಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರಸೀಕೆರೆ ತಾಲೂಕು ಗ್ರಾಮಾಂತರ ಬಿಜೆಪಿ ಘಟಕದ ಅಧ್ಯಕ್ಷ ವಿಜಯಕುಮಾರ್ ವಿರುದ್ಧ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ನೂರಾರು ಜನರ ಎದುರಲ್ಲೇ ಹಲ್ಲೆ ಮಾಡಲಾಗಿದೆ. ಬಿಜೆಪಿಯ ಬೂತ್ ವಿಜಯ ಅಭಿಯಾನದಲ್ಲಿ ಗ್ರಾಮಗಳಿಗೆ ತೆರಳಿದ್ದ ವೇಳೆ ಅವಮಾನ ಮಾಡಿದ ಹಿನ್ನೆಲೆಯಲ್ಲಿ ಹಲ್ಲೆ ಮಾಡಲಾಗಿದೆ ಎನ್ನಲಾಗಿದೆ.

ವಿಜಯಕುಮಾರ್ ಗೆ ಅವಮಾನ ಮಾಡಿದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದ ಆರೋಪ ತಮ್ಮ ಬೆಂಬಲಿಗರ ಜೊತೆ ಸೇರಿ ಹಾಡಹಗಲೇ ಹಲ್ಲೆ ನಡೆಸಿದ್ದಾರೆ. ವರ್ಷದ ಹಿಂದೆ ಬಿಜೆಪಿ ಸಮಾವೇಶದ ವೇಳೆ ಎರಡು ಬಣಗಳ ನಡುವೆ ಗಲಾಟೆ ನಡೆದಿತ್ತು. ಅರಸೀಕೆರೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎನ್.ಆರ್. ಸಂತೋಷ್ ಮತ್ತು ವಿಜಯಕುಮಾರ್ ಬಣಗಳ ನಡುವೆ ಗಲಾಟೆಯಾಗಿತ್ತು. ಈ ವೇಳೆ ಸಂತೋಷ್ ಬಣದಲ್ಲಿ ಕುಮಾರ್ ಗುರುತಿಸಿಕೊಂಡಿದ್ದರು ಎನ್ನಲಾಗಿದೆ. ಹಲ್ಲೆಗೊಳಗಾದ ಕುಮಾರ್ ಅವರಿಗೆ ಅರಸೀಕೆರೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular