HomeKarnatakaBREAKING NEWS: ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಬಿಜೆಪಿ ಕಾರ್ಯಕರ್ತ

BREAKING NEWS: ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಬಿಜೆಪಿ ಕಾರ್ಯಕರ್ತ

ಬೆಂಗಳೂರು: ಬಿಜೆಪಿ ಕಾರ್ಯಕರ್ತರೊಬ್ಬರು ಮನನೊಂದು ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿದೆ.

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ತನ್ನ ವಿರುದ್ಧ ಎಫ್ ಐಆರ್ ದಾಖಲಾಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಗವಾರದ ಕಚೇರಿಯಲ್ಲಿಯೇ ವಿನಯ್ ಸೋಮಯ್ಯ ನೇಣಿಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದಾರೆ. ರಾಜಕೀಯ ಪ್ರೇರಿತ ಎಫ್ ಐ ಆರ್ ನಿಂದ ಮನನೊಂದು ಸಾವನ್ನಪ್ಪುತ್ತಿರುವುದಾಗಿ ಬರೆದುಕೊಂಡಿದ್ದಾರೆ.

ವಿನಯ್ ಸೋಮಯ್ಯ, ಶಾಸಕ ಪೊನ್ನಣ್ಣ ಬಗ್ಗೆ ಅಪಹಾಸ್ಯ ಮಾಡಿ ವಾಟ್ಸಪ್ ಪೋಸ್ಟ್ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ತನ್ನೀರ ಮೈನಾ, ವಿನಯ್ ವಿರುದ್ಧ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿನಯ್ ಸೋಮಯ್ಯ ಬಂಧನವಾಗಿತ್ತು. ಇದರಿಂದ ಮನನೊಂದು ನಾಗವಾರದ ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


For Latest News Updates, Join Our Whatsapp Community🚩
RELATED ARTICLES

Most Popular