HomeLatest NewsBIG NEWS: ವಿಡಿಯೋ ಮಾಡಿಟ್ಟು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣು

BIG NEWS: ವಿಡಿಯೋ ಮಾಡಿಟ್ಟು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣು

ಬೆಂಗಳೂರು: ಬಿಜೆಪಿ ಕಾರ್ಯಕರ್ತರೊಬ್ಬರು ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ವೈಯ್ಯಾಲಿಕಾವಲ್ ನಲ್ಲಿ ನಡೆದಿದೆ.

ವೆಂಕಟೇಶ್ ಆತ್ಮಹತ್ಯೆಗೆ ಶರಣಾಗಿರುವ ಬಿಜೆಪಿ ಕಾರ್ಯಕರ್ತ. ಮಲ್ಲೇಶ್ವರಂ ಬಿಜೆಪಿ ಮಂಡಲದ ಕಾರ್ಯಕರ್ತರಾಗಿದ್ದ ವೆಂಕಟೇಶ್, ಮಾಜಿ ಡಿಸಿಎಂ ಅಶ್ವತ್ಥನಾರಾಯಣ ಅವರಿಗೆ ಆಪ್ತರಾಗಿದ್ದರು. ವೈಯ್ಯಾಲಿಕಾವಲ್ ನಲ್ಲಿರುವ ತನ್ನ ಟೂರ್ಸ್ ಆಂಡ್ ಟ್ರಾವೆಲ್ಸ್ ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆರ್ಥಿಕ ಸಂಕಷ್ಟದಿಂದ ಮನನೊಂದು ವೆಂಕಟೇಶ್ ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಚೀಟಿ ವ್ಯವಹಾರವನ್ನು ನಡೆಸುತ್ತಿದ್ದ ವೆಂಕಟೇಶ್ ಅವರಿಗೆ ಏಳು ಜನ ಚೀಟಿ ಹಣ ಕಟ್ಟದೆ ಮೋಸ ಮಾಡಿದ್ದರು. ಇದೇ ವೇಳೆ ಚೀಟಿ ಕಟ್ಟಿದ್ದ ಇನ್ನುಳಿದ ನಾಲ್ವರು ಹಣಕ್ಕಾಗಿ ಪೀಡಿಸುತ್ತಿದ್ದರು. ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೂ ಮುನ್ನ ವಿಡಿಯೋ ಮಾಡಿಟ್ಟಿದ್ದು, ಹಣಕಾಸಿನ ಸಮಸ್ಯೆ ಬಗ್ಗೆ ಹೇಳಿದ್ದಾರೆ ಅಲ್ಲದೇ ಜೀವನದಲ್ಲಿ ಏನಾದರೂ ಆಗಿ ಆದರೆ ಚೀಟಿ ಏಜೆಂಟ್ ಮಾತ್ರ ಆಗಬೇಡಿ ಎಂದು ರೆಕಾರ್ಡ್ ಮಾಡಿಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular