BIG NEWS: ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್

ಕಲಬುರ್ಗಿ: ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆತ್ಮಹತ್ಯೆ ಪ್ರಕರಣ ಈಗ ಮತ್ತೊಂದು ತಿರುವು ಪಡೆದುಕೊಂಡಿದೆ. ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಸಚಿವ ಶರಣ ಪ್ರಕಾಶ್ ಪಾಟೀಲ್ ವಿರುದ್ಧ ಆರೋಪ ಮಾಡಿ ಆಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಸಚಿವರ ರಾಜೀನಾಮೆಗೆ ಒತ್ತಾಯಿಸಿದ್ದರು. ಆದರೆ ಈಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಸಚಿವ ಶರಣಪ್ರಕಾಶ್ ಪಾಟೀಲ್ ವಿರುದ್ಧ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಶಿವಕುಮಾರ್ ನದ್ದು ಎಂದು ಹೇಳಲಾದ ಆಡಿಯೋ ಧ್ವನಿ ತಮ್ಮ ಮಗನದ್ದಲ್ಲ ಎಂದು ಶಿವಕುಮಾರ್ ಪೋಷಕರು ಹೇಳಿದ್ದಾರೆ.

ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಿರೋಳ್ಳಿ ಗ್ರಾಮದಲ್ಲಿ ಅಕ್ಟೋಬರ್ 19ರಂದು ಶಿವಕುಮಾರ್ ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದ. ಈತ ಬಿಜೆಪಿ ಕಾರ್ಯಕರ್ತ ಎನ್ನಲಾಗಿದ್ದು, ಆತ್ಮಹತ್ಯೆಗೂ ಮುನ್ನ ಮೂರು ಆಡಿಯೋ ಸಂದೇಶವನ್ನು ಕೆಲವರಿಗೆ ಕಳುಹಿಸಿದ್ದ. ಅದರಲ್ಲಿ ತನ್ನ ಸಾವಿಗೆ ಸಚಿವ ಶರಣ ಪ್ರಕಾಶ್ ಪಟೀಲ್ ಹಾಗೂ ಕೆಲ ಕಾಂಗ್ರೆಸ್ ಕಾರ್ಯಕರ್ತರು ಕಾರಣ ಎಂದು ಅವರಿಗೆ ಹಿಂದೂ ಧರ್ಮ ಅಂದ್ರೆ ಆಗಿ ಬರಲ್ಲ ನನ್ನದು ಸಹಜ ಸಾವಲ್ಲ ಎಂದು ಎಂದಿದ್ದ.

ಈ ಪ್ರಕರಣದ ಬೆನ್ನಲ್ಲೇ ಶಿವಕುಮಾರ್ ಪತ್ನಿ ತನ್ನ ಪತಿ ಸಾಲ ಮಾಡಿಕೊಂಡಿದ್ದರು. ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ದೂರು ದಾಖಲಿಸಿದ್ದರು. ಈಗ ಶಿವಕುಮಾರ್ ಸಾವಿಗೂ ಮುನ್ನ ರೆಕಾರ್ಡ್ ಮಾಡಿಟ್ಟಿದ್ದ ಎನ್ನಲಾದ ಆಡಿಯೋ ಆತನದ್ದಲ್ಲ ಎಂದು ಹೇಳಲಾಗುತ್ತಿದೆ. ಪ್ರಕರಣದ ಬಗ್ಗೆ ತನಿಖೆ ಮುಂದುವರೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read