HomeKarnatakaಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ: ಐವರ ವಿರುದ್ಧ ಪ್ರಕರಣ ದಾಖಲು

ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ: ಐವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಲಾಗಿದ್ದು, ಐವರ ವಿರುದ್ಧ ಪ್ರಕರಣ ದಾಖಲಾಗಿದೆ.

ಬಿಜೆಪಿ ತಾಲೂಕು ಯುವ ಮೋರ್ಚಾ ಅಧ್ಯಕ್ಷ ನಗರ ನಿತಿನ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಭಾನುವಾರ ರಾತ್ರಿ ನಿತಿನ್ ತಮ್ಮ ಸಹೋದರ ನವೀನ್ ಜೊತೆ ಕಾರ್ ನಲ್ಲಿ ಬಸವನ ಬ್ಯಾಣ ಗ್ರಾಮದ ತಮ್ಮ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಮಳಲಿ ಗ್ರಾಮದ ಪ್ರಕಾಶ ಮತ್ತು ಆತನ ಸಹಚರರು ಕಾರ್ ಅಡ್ಡಗಟ್ಟಿ ಥಳಿಸಿದ್ದಾರೆ. ಕಾರ್ ಹಿಂಬದಿಯ ಗಾಜು ಒಡೆದು ಹಾಕಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಗರ ಠಾಣೆ ಪೊಲೀಸರಿಗೆ ದೂರು ನೀಡಲಾಗಿದೆ.

ಪ್ರಕಾಶ್, ಸಂದೇಶ್, ನಾಗೇಶ್, ನವೀನ್, ಸಚಿನ್ ಎಂಬುವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಾಯಗೊಂಡ ನಿತಿನ್ ಮತ್ತು ನವೀನ್ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular