HomeKarnatakaಪದಾಧಿಕಾರಿಗಳ ನೇಮಕ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರ ಮಾರಾಮಾರಿ

ಪದಾಧಿಕಾರಿಗಳ ನೇಮಕ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರ ಮಾರಾಮಾರಿ

ಚಿಕ್ಕಮಗಳೂರು: ಬಿಜೆಪಿ ತಾಲೂಕು ಘಟಕಗಳ ನೂತನ ಅಧ್ಯಕ್ಷರ ಹೆಸರು ಘೋಷಣೆಯಾದ ಬೆನ್ನಲ್ಲೇ ಮೂಡಿಗೆರೆಯಲ್ಲಿ ಬಿಜೆಪಿ ಕಾರ್ಯಕರ್ತರ ನಡುವೆ ಮಾರಮಾರಿ ನಡೆದಿದೆ.

ಶುಕ್ರವಾರ ಸಂಜೆ ಕಾರ್ಯಕರ್ತರ ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ರತನ್, ಹಾಲಿ ಸದಸ್ಯ ಅನುಕುಮಾರ್ ನಡುವೆ ರಸ್ತೆಯಲ್ಲೇ ಹೊಡೆದಾಟ ನಡೆದಿದೆ. ರತನ್ ಅವರ ಶರ್ಟ್ ಮತ್ತು ಬನಿಯನ್ ಹರಿದು ಹಾಕಲಾಗಿದ್ದು, ರಸ್ತೆಯಲ್ಲೇ ಉರುಳಿಸಲಾಗಿದೆ. ಗಲಾಟೆ ವಿಡಿಯೋ ಜಾಲತಾಣಗಳಲ್ಲಿ ಹರಿದಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೂಡಿಗೆರೆ ಬಿಜೆಪಿ ಮಂಡಲದ ಅಧ್ಯಕ್ಷರಾಗಿ ಟಿ.ಎಂ. ಗಜೇಂದ್ರ ಅವರನ್ನು ಪಕ್ಷದ ಜಿಲ್ಲಾಧ್ಯಕ್ಷ ದೇವರಾಜ ಶೆಟ್ಟಿ ಘೋಷಣೆ ಮಾಡಿದ್ದಾರೆ. ಇದಾದ ನಂತರ ಬಿಜೆಪಿ ಕಾರ್ಯಕರ್ತರು ಪಕ್ಷದ ಕಚೇರಿಯಲ್ಲಿ ಸೇರಿದ್ದರು. ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಅನುಕುಮಾರ್ ತಮಗೆ ಅಧ್ಯಕ್ಷ ಸ್ಥಾನ ತಪ್ಪಿಸಲು ರತನ್ ಕಾರಣ ಎಂದು ವಾಗ್ವಾದ ನಡೆಸಿದ್ದಾರೆ. ಇಬ್ಬರ ನಡುವಿನ ಜಗಳ ರಸ್ತೆಗೆ ಬಂದು ಮಾರಾಮಾರಿ ನಡೆದಿದೆ. ಗಾಯಗೊಂಡ ರತನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular