HomeKarnatakaBREAKING : ಮಂಗಳೂರಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ; ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಕಾರಿಗೆ...

BREAKING : ಮಂಗಳೂರಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ; ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಕಾರಿಗೆ ಮುತ್ತಿಗೆ ಯತ್ನ

ಮಂಗಳೂರು : ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಕಾರಿಗೆ ಮುತ್ತಿಗೆ   ಹಾಕಲು ಯತ್ನಿಸಿದ್ದಾರೆ  ಎಂದು ಹೇಳಲಾಗಿದೆ.

ಮಂಗಳೂರಿನಲ್ಲಿ ಇಂದು ನಡೆಯಲಿರುವ ಕಾಂಗ್ರೆಸ್ ಕಾರ್ಯರ್ಕತರ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬರುತ್ತಿದ್ದರು. ಈ ವೇಳೆ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಕಾರನ್ನು ಅಡ್ಡಗಟ್ಟಿ ಹಿಂದೂ ವಿರೋಧಿ ಸರ್ಕಾರ ಎಂದು ಘೋಷಣೆ ಕೂಗಿದ್ದಾರೆ. ನಂತರ ಬಿಜೆಪಿ ಕಾರ್ಯಕರ್ತರು ಪೊಲೀಸರನ್ನು ತಡೆದಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳೂರಿನಲ್ಲಿ ಇಂದು ಕಾಂಗ್ರೆಸ್ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ ನಡೆಯಲಿದ್ದು, ಮಂಗಳೂರಿನ ಆಡ್ಯಾರ್ ನಲ್ಲಿರುವ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಸಮಾವೇಶ ಆಯೋಜಿಸಲಾಗಿದೆ.ಲೋಕಸಭೆ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಎಐಸಿಸಿ ಸೂಚನೆ ಮೇರೆಗೆ ರಾಜ್ಯಮಟ್ಟದ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಎಲ್ಲಾ ಸಚಿವರು, ಸಂಸದರು, ಶಾಸಕರು, ಕೆಪಿಸಿಸಿ ಪದಾಧಿಕಾರಿಗಳು, ಹಾಜರಿರಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular