HomeKarnatakaಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈ ಬಿಟ್ಟಿದ್ದಕ್ಕೆ ಯತ್ನಾಳ್ ಗುಡುಗು

ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈ ಬಿಟ್ಟಿದ್ದಕ್ಕೆ ಯತ್ನಾಳ್ ಗುಡುಗು

ವಿಜಯಪುರ: ತಮ್ಮನ್ನು ಹಾಗೂ ರಮೇಶ ಜಾರಕಿಹೊಳಿಯವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಬಿಟ್ಟಿರುವುದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ಮುಂದುವರೆಸಿದ್ದಾರೆ.

ರಾಜ್ಯದ ಜನ ನಮ್ಮನ್ನು ಒಪ್ಪಿಕೊಂಡಿದ್ದಾರೆ. ಜನರೇ ನಮ್ಮನ್ನು ಸ್ಟಾರ್ ಮಾಡಿದ್ದಾರೆ. ಬೇರೆ ಯಾರೂ ನಮ್ಮನ್ನು ಸ್ಟಾರ್ ಮಾಡಬೇಕಿಲ್ಲ ಎಂದು ಯತ್ನಾಳ್ ಸ್ವಪಕ್ಷ ನಾಯಕರ ವಿರುದ್ಧ ಹರಿಹಾಯ್ದರು.

ಉಪ ಚುನಾವಣೆ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ತಮ್ಮನ್ನು ಮತ್ತು ರಮೇಶ್ ಜಾರಕಿಹೊಳಿ ಅವರನ್ನು ಕೈಬಿಟ್ಟಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಜನರೇ ನಮ್ಮನ್ನು ಸ್ಟಾರ್ ಮಾಡಿದ್ದಾರೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ಕರ್ನಾಟಕ ಎಕ್ಸ್ ಖಾತೆಯನ್ನು ಬಿವೈವಿ ಕರ್ನಾಟಕ ಎಂದು ಬದಲಿಸುವುದು ಒಳ್ಳೆಯದು. ಅದರಲ್ಲಿ ಅಧ್ಯಕ್ಷರ ಗುಣಗಾನ ಬಿಟ್ಟರೆ ಬೇರೆ ಏನೂ ಇರುವುದಿಲ್ಲ ಎಂದು ಟೀಕಿಸಿದ್ದಾರೆ. ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಹಿಂದೂಗಳ ಮತ ಬೇಕಾದರೆ ನಮ್ಮನ್ನು ಕರೆಯಲಿ. ಮುಸ್ಲಿಮರು ಮತ ಹಾಕುತ್ತಾರೆ ಎಂದು ತಿಳಿದುಕೊಂಡಿದ್ದರೆ ಕರೆಯಬೇಡಿ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular