HomeKarnatakaರಾಜ್ಯ ಬಿಜೆಪಿಯಲ್ಲಿ ಬಣ ತಿಕ್ಕಾಟ ಜೋರಾಗ್ತಿದ್ದಂತೆ ಹೈಕಮಾಂಡ್ ಮಧ್ಯಪ್ರವೇಶ: ಶಾಸಕ ಯತ್ನಾಳ್ ಗೆ ಶಿಸ್ತು ಸಮಿತಿ...

ರಾಜ್ಯ ಬಿಜೆಪಿಯಲ್ಲಿ ಬಣ ತಿಕ್ಕಾಟ ಜೋರಾಗ್ತಿದ್ದಂತೆ ಹೈಕಮಾಂಡ್ ಮಧ್ಯಪ್ರವೇಶ: ಶಾಸಕ ಯತ್ನಾಳ್ ಗೆ ಶಿಸ್ತು ಸಮಿತಿ ನೋಟಿಸ್

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣ ಜಗಳ ತಾರಕಕ್ಕೇರಿದ್ದು, ಇದರ ಬೆನ್ನಲ್ಲೇ ಹೈಕಮಾಂಡ್ ಮಧ್ಯಪ್ರವೇಶಿಸಿದೆ. ಪಕ್ಷದ ವಿರುದ್ಧ ಸದಾ ಹೇಳಿಕೆ ನೀಡುತ್ತಿರುವ ವಿಜಯಪುರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ.

ಬಿಜೆಪಿ ಕೇಂದ್ರೀಯ ಸಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ನೀಡಲಾಗಿದ್ದು, 10 ದಿನದೊಳಗೆ ಉತ್ತರ ನೀಡುವಂತೆ ಸೂಚಿಸಲಾಗಿದೆ. ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧದ ನಿಲುವು ಹಿನ್ನೆಲೆಯಲ್ಲಿ ಯತ್ನಾಳ್ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ.  ಸದ್ಯ ಯತ್ನಾಳ್ ದೆಹಲಿಯಲ್ಲಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಯತ್ನಾಳ್ ನಿರಂತರ ಹೇಳಿಕೆ ನೀಡುತ್ತಿದ್ದರು. ವಿಜಯೇಂದ್ರ ದೆಹಲಿಗೆ ತೆರಳಿ ವರಿಷ್ಠರ ಭೇಟಿಯಾಗಿ ರಾಜ್ಯದ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದ್ದರು. ಇದರ ಬೆನ್ನಲ್ಲೇ ಯತ್ನಾಳ್ ಅವರಿಗೆ ಬಿಜೆಪಿ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಬಿಜೆಪಿ ಬಣ ತಿಕ್ಕಾಟ ಮತ್ತಷ್ಟು ಜೋರಾಗಿದ್ದು, ಯತ್ನಾಳ್ ಟೀಂ ದೆಹಲಿಗೆ ತೆರಳಿ ದೂರು ನೀಡಲು ಮುಂದಾಗಿದೆ. ವಿಜಯೇಂದ್ರ ಪರ ಬ್ಯಾಟಿಂಗ್ ನಡೆಸಲು ಮತ್ತೊಂದು ತಂಡ ಕೂಡ ದೆಹಲಿಗೆ ಹೊರಟಿದೆ.

ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿಯಾಗಿ ವಿಜಯೇಂದ್ರ ವಿರುದ್ಧ ದೂರು ಸಲ್ಲಿಸಲು ಯತ್ನಾಳ್ ತಂಡ ಮುಂದಾಗಿದೆ ಎಂದು ಹೇಳಲಾಗಿದೆ. ಯಡಿಯೂರಪ್ಪ ನಿಷ್ಠರ ಪಡೆ ಕೂಡ ಸಕ್ರಿಯವಾಗಿದ್ದು, ಪ್ರತಿ ದೂರು ಸಲ್ಲಿಸಲು ದೆಹಲಿಗೆ ಹೊರಟಿದೆ. ಇದೇ ಹೊತ್ತಲ್ಲಿ ಯತ್ನಾಳ್ ಗೆ ಬಿಜೆಪಿ ಶಿಸ್ತು ಸಮಿತಿಯಿಂದ ನೋಟಿಸ್ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular