HomeKarnatakaBIG NEWS: ಕೇಸರಿ ಮನೆಯಲ್ಲಿ ಮತ್ತೆ ತಾರಕಕ್ಕೇರಿದ ಬಣ ಬಡಿದಾಟ: ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಯತ್ನಾಳ್...

BIG NEWS: ಕೇಸರಿ ಮನೆಯಲ್ಲಿ ಮತ್ತೆ ತಾರಕಕ್ಕೇರಿದ ಬಣ ಬಡಿದಾಟ: ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಯತ್ನಾಳ್ ಟೀಂ ಮತ್ತೊಂದು ಸಭೆ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ತಾರಕ್ಕೇರಿದೆ. ಶಾಸಕ ಯತ್ನಾಳ್ ಟೀಂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದೆ. ಪ್ರತ್ಯೇಕವಾಗಿ ಸಭೆ ಮೇಲೆ ಸಭೆ ನಡೆಸುತ್ತಿದೆ.

ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರ ಸದಾಶಿವನಗರ ನಿವಾಸದಲ್ಲಿ ಯತ್ನಾಳ್ ಬಣ ಸಭೆ ನಡೆಸಿದೆ. ಜಿಲ್ಲಾಧ್ಯಕ್ಷರ ನೇಮಕ ವಿಚಾರ, ರಾಜ್ಯಾಧ್ಯಕ್ಷರ ಸ್ಥಾನದ ಚುನಾವಣೆ ಪ್ರಮುಖವಾಗಿ ಚರ್ಚೆಗೆ ಬರಲಿದೆ. ಅಲ್ಲದೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಡೆ ಬಗ್ಗೆಯೂ ಸಮಾಲೋಚನೆ ನಡೆಯಲಿದೆ.

ಸಭೆಯಲ್ಲಿ ಶಾಸಕ ಯತ್ನಾಳ್, ರಮೇಶ್ ಜಾರಕಿಹೊಳಿ, ಚಂದ್ರಪ್ಪ, ಬಿ.ಪಿ.ಹರೀಶ್, ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ್, ಬಿ.ವಿ.ನಾಯಕ್, ಕುಮಾರ್ ಬಂಗಾರಪ್ಪ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular