HomeKarnatakaಹಳಬರಿಗೆ ಬಿಗ್ ಶಾಕ್: ಹೊಸಬರಿಗೆ ಚಾನ್ಸ್: 25 ಕ್ಷೇತ್ರಗಳಲ್ಲಿ ಹೊಸಮುಖಗಳಿಗೆ ಬಿಜೆಪಿ ಮಣೆ

ಹಳಬರಿಗೆ ಬಿಗ್ ಶಾಕ್: ಹೊಸಬರಿಗೆ ಚಾನ್ಸ್: 25 ಕ್ಷೇತ್ರಗಳಲ್ಲಿ ಹೊಸಮುಖಗಳಿಗೆ ಬಿಜೆಪಿ ಮಣೆ

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ. 150 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಸಿದ್ಧಪಡಿಸಿದೆ.

ಸಂಜೆ ಅಂತಿಮ ಪಟ್ಟಿ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ನಿನ್ನೆ ಸತತ 12 ತಾಸು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಪ್ರಮುಖರೊಂದಿಗೆ ಸಭೆ ನಡೆಸಿದ್ದಾರೆ. 180 ಕ್ಷೇತ್ರಗಳ ಬಗ್ಗೆ ಚರ್ಚೆ ನಡೆಸಿದ್ದು, ಹಳಬರಿಗೆ ಶಾಕ್ ನೀಡಿ ಹೊಸಬರಿಗೆ ಚಾನ್ಸ್ ಸಿಗುವ ಸಾಧ್ಯತೆ ಇದೆ. 20 ರಿಂದ 25 ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಆದ್ಯತೆ ನೀಡಲು ಚರ್ಚೆ ನಡೆಸಿದ್ದು, ಸಂಸದೀಯ ಮಂಡಳಿ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular