ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮುಖಂಡನನ್ನು ಹತ್ಯೆ ಮಾಡಲಾಗಿದ್ದು, ಈ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಳ್ಳಾರಿ ಜಿಲ್ಲೆಯ ಕಂಪ್ಲಿಯಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಧನಂಜಯ್, ಮೈಲಾರಿ ಅಲಿಯಾಸ್ ವಿಜಯ್, ಸಲೀಂ, ಭೀಮ ಎಂದು ಗುರುತಿಸಲಾಗಿದೆ.ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕುರುಬರ(31) ಹತ್ಯೆಯಾದವರು. ಗಂಗಾವತಿಯ ಲೀಲಾವತಿ ಆಸ್ಪತ್ರೆಯ ಮುಂಭಾಗ ಮಧ್ಯರಾತ್ರಿ ಎರಡು ಗಂಟೆಗೆ ಕಾರ್ ನಲ್ಲಿ ಆಗಮಿಸಿದ್ದ ಆರೋಪಿಗಳು ವೆಂಕಟೇಶ್ ನನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ.
ಸ್ನೇಹಿತರೊಂದಿಗೆ ಊಟ ಮುಗಿಸಿದ ವೆಂಕಟೇಶ್ ದೇವಿ ಕ್ಯಾಂಪ್ ನಿಂದ ಗಂಗಾವತಿಗೆ ಹೋಗುತ್ತಿದ್ದ ವೇಳೆ ಬೈಕ್ ಫಾಲೋ ಮಾಡಿದ ದುಷ್ಕರ್ಮಿಗಳು ಕಾರ್ ನಿಂದ ವೆಂಕಟೇಶ್ ಇದ್ದ ಬೈಕ್ ಗೆ ಗುದ್ದಿಸಿದ್ದಾರೆ. ವೆಂಕಟೇಶ್ ಕೆಳಗೆ ಬೀಳುತ್ತಿದ್ದಂತೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆ ಮಾಡಿದ್ದಾರೆ.