BIG NEWS: ಕೈಕೊಟ್ಟ ಯೋಜನೆಗಳು, ಹಳಿತಪ್ಪಿದ ಆಡಳಿತ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಚಾರ್ಜ್ ಶೀಟ್ ಬಿಡುಗಡೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಶತದಿನ ಆಚರಣೆ ಸಂಭ್ರಮದಲ್ಲಿದ್ದರೆ ವಿಪಕ್ಷ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಪಟ್ಟಿ ಮಾಡಿ ಚಾರ್ಜ್ ಶೀಟ್ ಬಿಡುಗಡೆ ಮಾಡಿದೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯ ಸರ್ಕಾರದ 100 ವೈಫಲ್ಯಗಳನ್ನು ಒಳಗೊಂಡ ‘ಕೈಕೊಟ್ಟ ಯೋಜನೆಗಳು, ಹಳಿತಪ್ಪಿದ ಆಡಳಿತ’ ಪುಸ್ತಕ ಬಿಡುಗಡೆ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, ನೂರು ದಿನಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಜನರಿಗೆ ದ್ರೋಹ ಬಗೆದಿದೆ. ನೂರಾರು ತಪ್ಪುಗಳನ್ನು ಮಾಡಿದ್ದಾರೆ. ಇಬ್ಬರು ಸಚಿವರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿತ್ತು. ಆದಗ್ಯೂ ಸಚಿವರು ರಾಜಿನಾಮೆ ನೀಡಿಲ್ಲ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಸರ್ಕಾರವಿದ್ದಾಗ ಬಂಡವಾಳ ಹೂಡಿಕೆಗೆ ಹೂಡಿಕೆದಾರರು ಬಂದಿದ್ದರು. ಆದರೆ ಈಗ ವಿದ್ಯುತ್ ದರ ಹೆಚ್ಚಳದಿಂದ ಹೂಡಿಕೆದಾರರು ವಾಪಸ್ ಹೋಗಿದ್ದಾರೆ. ರೈತ ವಿದ್ಯಾನಿಧಿ, ಕಿಸಾನ್ ಸಮ್ಮಾನ್ ಯೋಜನೆಗೆ ಕತ್ತರಿ ಹಾಕಿದ್ದಾರೆ. ಭ್ರಷ್ಟಾಚಾರ ಮಾಡುವುದರಲ್ಲಿಯೇ ಸರ್ಕಾರ ನಿರತವಾಗಿದೆ ಎಂದು ಕಿಡಿಕಾರಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read