HomeUncategorizedBREAKING: ಕೆಪಿಸಿಸಿ ಕಚೇರಿಯತ್ತ ಬಂದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಮೊಟ್ಟೆ ಎಸೆತ

BREAKING: ಕೆಪಿಸಿಸಿ ಕಚೇರಿಯತ್ತ ಬಂದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಮೊಟ್ಟೆ ಎಸೆತ

ಬೆಂಗಳೂರು: ನೀಟ್ ಸಂಘರ್ಷ ರಾಜಕೀಯ ತಿರುವು ಪಡೆದುಕೊಂಡಿದ್ದು, ಕಾಂಗ್ರೆಸ್ ಪ್ರತಿಭಟನೆಗೆ ಕೌಂಟರ್ ನೀಡಿರುವ ಬಿಜೆಪಿ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಹರಿಹರ ಬಿಜೆಪಿ ಶಾಸಕ ಬಿ.ಪಿ,ಹರೀಶ್ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೀಟ್ ಅಕ್ರಮದ ವಿರುದ್ಧ ದೇಶಾದ್ಯಂತ ಯುವಜನತೆ ಜೊತೆಗೆ ಕಾಂಗ್ರೆಸ್ ಪ್ರತಿಭಟನೆ ತೀವ್ರಗೊಳಿಸಿರುವ ಬೆನ್ನಲ್ಲೇ ಬಿಜೆಪಿ ಕೂಡ ದೇಶಾದ್ಯಂತ ಪ್ರತಿಭಟನೆಗೆ ನಿರ್ಧರಿಸಿದ್ದು, ಕಾಂಗ್ರೆಸ್ ಕಚೇರಿಗಳಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಲು ಮುಂದಾಗಿದೆ. ಇದರ ಭಾಗವಾಗಿ ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ಜೋರಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಬಳಿಕ ಆರ್.ಅಶೋಕ್ ಕಂಟೋನ್ಮೆಂಟ್ ಬಳಿ ಬಿಜೆಪಿ ಶಾಸಕರು, ಕಾರ್ಯಕರ್ಯರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದು, ಅಲ್ಲಿಂದ ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕುವ ನಿಟ್ಟಿನಲ್ಲಿ ಪಾದಯಾತ್ರೆ ಮೂಲಕ ಮುನ್ನುಗ್ಗಲು ಯತ್ನಿಸಿದ್ದಾರೆ. ಆರ್.ಅಶೋಕ್ ವಾಹನವನ್ನೇ ಹಿಂಬಾಲಿಸಿ ಬಂದ ಶಾಸಕ ಬಿ.ಪಿ.ಹರೀಶ್ ಅವರಿಗೆ ಟ್ರಾಫಿಕ್ ಜಾಮ್ ನಿಂದಾಗಿ ಕಂಟೋನ್ಮೆಂಟ್ ಗೆ ಹೋಗುವ ದಾರಿ ತಪ್ಪಿದ್ದಾರೆ. ಈ ವೇಳೆ ಕೆಪಿಸಿಸಿ ಕಚೇರಿಗೆ ಬಿಜೆಪಿಗೆ ಮುತ್ತಿಗೆ ಹಾಕುವ ಬಗ್ಗೆ ಶಾಸಕರಿಗೆ ಮಾಹಿತಿ ಇದ್ದುದರಿಂದ ಬಿ.ಪಿ.ಹರೀಶ್ ಕಾರು ಚಾಲಕ ಅವರನ್ನು ಕೆಪಿಸಿಸಿ ಕಚೇರಿ ಬಳಿ ಕರೆತಂದಿದ್ದಾರೆ.

ಬಿ.ಪಿ.ಹರೀಶ್ ಕಾರು ಇಳಿಯುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಬಿ.ಪಿ.ಹರೀಶ್ ಮೇಲೆ ಮೊಟ್ಟೆ ಎಸೆದಿದ್ದಾರೆ. ಅವರ ತಲೆಗೆ ಬಿದ್ದ ಮೊಟ್ಟೆ ತಲೆಯಲ್ಲೇ ಸಿಲುಕಿಕೊಂಡಿದೆ. ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಬಿ.ಪಿ.ಹರೀಶ್ ಅವರನ್ನು ರಕ್ಷಿಸಿ ಪಕ್ಕದ ರಸ್ತೆಗೆ ಕರೆದೊಯ್ದಿದ್ದಾರೆ.

ಬಿಜೆಪಿ ಶಾಸಕರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದ ಪ್ರಸಂಗದ ಬೆನ್ನಲ್ಲೇ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರ ಆಕ್ರೋಶ ಮತ್ತಷ್ಟು ಹೆಚ್ಚಿದ್ದು, ಉಗ್ರಹೋರಾಟಕ್ಕೆ ಮುಂದಾಗಿದ್ದಾರೆ. ಇನ್ನೊಂದೆಡೆ ಶಾಸಕರ ಮೇಲೆ ಮೊಟ್ಟೆ ಎಸೆದ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular