BIG NEWS: ಬಿಜೆಪಿ ಅವನತಿಯತ್ತ ಸಾಗುತ್ತಿದೆ; ಬಿ.ಎಲ್.ಸಂತೋಷ್ ವಿರುದ್ಧ ಮತ್ತೆ ಪರೋಕ್ಷ ವಾಗ್ದಾಳಿ ನಡೆಸಿದ ರೇಣುಕಾಚಾರ್ಯ

ದಾವಣಗೆರೆ: ಬಿಜೆಪಿ ಅವನತಿಯತ್ತ ಸಾಗುತ್ತಿದೆ. ಕರ್ನಾಟಕದಲ್ಲಿ ಬಿಜೆಪಿಗೆ ನಾಯಕತ್ವವೇ ಇಲ್ಲ. ಇದೇ ಕಾರಣಕ್ಕೆ ಪಕ್ಷದ ಮುಖಂಡರು ಬೇರೆ ಬೇರೆ ಪಕ್ಷದತ್ತ ಮುಖ ಮಾಡಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಪಿ.ರೇಣುಕಾಚಾರ್ಯ, ವ್ಯಕ್ತಿಗಿಂತ ಪಕ್ಷ ಮುಖ್ಯ ಎಂದು ಕೆಲ ಮುಖಂಡರು ಹೇಳುತ್ತಾರೆ. ಹೀಗೆ ಹೇಳುವ ವ್ಯಕ್ತಿ ತಮ್ಮದೇ ಗುಂಪು ಕಟ್ಟಿಕೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಸೇರಿ ಬಹುತೇಕರನ್ನು ಗುಂಪು ಮಾಡಿಕೊಂಡಿದ್ದಾರೆ. ಗ್ರಾಮ ಪಂಚಾಯಿತಿ ಚುನವಣೆಯಲ್ಲಿಯೂ ಗೆಲ್ಲದವರನ್ನು ಗುಂಪು ಮಾಡಿದ್ದಾರೆ ಎಂದು ಪರೋಕ್ಷವಾಗಿ ಬಿ.ಎಲ್.ಸಂತೋಷ್ ವಿರುದ್ಧ ಗುಡುಗಿದ್ದಾರೆ.

ಬಿಎಸ್ ವೈ ಅವರನ್ನು ರಾಜಕೀಯವಾಗಿ ಮುಗಿಸಿದ್ರು. ಪಕ್ಷಸಹ ಮುಗಿಸಿಬಿಟ್ರು. ಕರ್ನಾಟಕದಲ್ಲಿ ಭರತೀಯ ಜನತಾಪಕ್ಷಕ್ಕೆ ನಾಯಕತ್ವವೇ ಇಲ್ಲ. ಇದೇ ಕಾರಣಕ್ಕೆ ಬಿಜೆಪಿ ನಾಯಕರು ಬೇರೆ ಬೇರೆ ಪಕ್ಷದತ್ತ ಹೋಗುತ್ತಿದ್ದಾರೆ. ರಾಷ್ಟ್ರ ಮಟ್ಟದಲ್ಲಿ ಮೋದಿ ಹೇಗೆ ಮುಖ್ಯವೋ, ರಾಜ್ಯದಲ್ಲಿ ಬಿಎಸ್ ವೈ ಮುಖ್ಯ. ರಾಜ್ಯ ಬಿಜೆಪಿಯನ್ನು ಯಡಿಯೂರಪ್ಪ ಅವರ ಕೈಗೆ ಕೊಡಲಿ ನೋಡೋಣ. ರಾಜ್ಯ ಬಿಜೆಪಿ ಅಧ್ಯಕ್ಷರು ಬದಲಾವಣೆಯಾದರೆ ಹೊಸತನ ಬರುತ್ತದೆ ಎಂದು ನೇರವಾಗಿ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read