ಬೆಂಗಳೂರು: ಬಿಡದಿ ಟೌನ್ ಶಿಪ್ ವಿರೋಧಿಸಿ ರೈತರೊಂದಿಗೆ ವಿಪಕ್ಷ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಟೌನ್ ಶಿಫ್ ವಿರೋಧಿಸಿ ಪಾದಯಾತ್ರೆ ನಡೆಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಘೋಷಿಸಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮತನಾಡಿದ ವಿಜಯೇಂದ್ರ ಬಿಡದಿ ಟೌನ್ ಶಿಪ್ ನಿರ್ಮಾಣ ವಿರೋಧಿಸಿ ಹಾಗೂ ಕನಕಪುರದಲ್ಲಿ ವಿಮಾನ ನಿಲ್ದಾಣ ವಿರೋಧಿಸಿ ತುಮಕೂರು ಭಾಗದಲ್ಲಿ ಏರ್ ಪೋರ್ಟ್ ನಿರ್ಮಾಣ ಮಾಡುವಂತೆ ಆಗ್ರಹಿಸಿ ಬಿಜೆಪಿ ಪಾದಯಾತ್ರೆ ನಡೆಸಲಿದೆ ಎಂದು ತಿಳಿಸಿದರು.
ಬಿಡದಿಯಿಂದ ಬೆಂಗಳೂರಿನವರೆಗೆ ರೈತರೊಂದಿಗೆ ಪಾದಯಾತ್ರೆ ನಡೆಸಲಿದ್ದು, ಪಾದಯಾತ್ರೆ ದಿನಾಂಕ ಶೀಘ್ರವೇ ನಿಗದಿಗೊಳಿಸಲಾಗುವುದು ಎಂದರು. ರಾಜ್ಯ ಸರ್ಕಾರ ಅಧಿವೇಶನದ ಒಳಗೆ ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರದಿಂದ ಹಿಂದೆ ಸರಿಯಬೇಕು. ಹಾಗೂ ಕನಕಪುರದಲ್ಲಿ ಏರ್ ಪೋರ್ಟ್ ನಿರ್ಮಿಸುವ ನಿರ್ಧಾರ ಕೈಬಿಟ್ಟು ತುಮಕೂರು ಭಾಗದಲ್ಲಿ ಏರ್ ಪೋರ್ಟ್ ನಿರ್ಮಾಣಕ್ಕೆ ಘೋಷಿಸಬೇಕು ಎಂದು ಆಗ್ರಹಿಸಿದರು. ಇಲ್ಲವಾದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು ಎಂದರು.
ಇದೇ ವೇಳೆ ಬಿಡದಿ ಟೌನ್ ಶಿಪ್ ನಿರ್ಮಾಣ ವಿರೋಧಿಸಿ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಒಂದು ದಿನದ ಪ್ರತಿಭಟನೆ ಅಂತ್ಯವಾಗಿದೆ ಎಂದು ತಿಳಿದುಬಂದಿದೆ.

