HomeKarnatakaBIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ CBI ಕೇಸ್ ವಾಪಾಸ್ ಗೆ ಪ್ರಸ್ತಾವನೆ; ಪ್ರತಿಭಟನೆಗೆ ಮುಂದಾದ...

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ CBI ಕೇಸ್ ವಾಪಾಸ್ ಗೆ ಪ್ರಸ್ತಾವನೆ; ಪ್ರತಿಭಟನೆಗೆ ಮುಂದಾದ ಬಿಜೆಪಿ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ಆದೇಶ ವಾಪಾಸ್ ಪಡೆಯಲು ಸರ್ಕಾರದಿಂದ ಪ್ರಸ್ತಾವನೆ ವಿಚಾರವಾಗಿ ತೀವ್ರ ಖಂಡನೆ ವ್ಯಕ್ತಪಡಿಸಿರುವ ವಿಪಕ್ಷ ಬಿಜೆಪಿ ಪ್ರತಿಭಟನೆಗೆ ಮುಂದಾಗಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಧೋರಣೆ ವಿರುದ್ಧ ನಾಳೆ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ಆದೇಶ ವಾಪಾಸ್ ಪಡೆಯಲು ನಿರ್ಧರಿಸಿ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷಗಳು ಕೆಂಡ ಕಾರಿದ್ದು, ಪ್ರಕರಣದ ತನಿಖೆಯಿಂದ ತಪ್ಪಿಸಿಕೊಳ್ಳಲು ಸಚಿವ ಸಂಪುಟದಲ್ಲಿಯೇ ಇಂತಹ ನಿರ್ಧಾರ ಕೈಗೊಳ್ಳಲು ಮುಂದಾಗಿದ್ದು ಕಾನೂನು ಬಾಹಿರ ಎಂದು ಆಕ್ರೋಶ ವ್ಯಕ್ತಪಡಿಸಿವೆ.

ಸರ್ಕಾರದ ಕ್ರಮವನ್ನು ಖಂಡಿಸಿ ರಾಜ್ಯ ಬಿಜೆಪಿ ಘಟಕ ನಾಳೆ ಪ್ರತಿಭಟನೆ ನಡೆಸಲು ಮುಂದಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular