ಬೆಂಗಳೂರು: ಬೃಹತ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ ನಾಯಕರು ಗ್ರೇಟರ್ ಬೆಂಗಳೂರು ಚುನಾವಣೆಯಲ್ಲಿಯೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿದ್ದು, ಮುಂಬೈನಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಅದೇ ರೀತಿ ಜಿಬಿಎ ವ್ಯಾಪ್ತಿಯ ೫ ಮಹಾನಗರ ಪಾಲಿಕೆಗಳಲ್ಲಿಯೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ತಿಳಿಸಿದ್ದಾರೆ.
ಜಿಬಿಎಂ ವ್ಯಾಪ್ತಿಯ 5 ಪಾಲಿಕೆಗಳಲ್ಲಿಯೂ ಬೆಂಗಳೂರು ಮಹಾನಗರ ಜನತೆ ಬಿಜೆಪಿ ದೊಡ್ಡ ಮಟ್ಟದಲ್ಲಿ ಆಶಿರ್ವಾದ ಮಾಡಲಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶಗಳ ಮೂಲಕ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಪತನದ ಹಾದಿ ಆರಂಭವಾಗುವುದು ಖಚಿತ ಎಂದಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವಿನ ಬಳಿಕ ಈಗ ಬಿಎಂಸಿ ಸೇರಿದಂತೆ ಪುಣೆ, ನಾಗಪುರ ಹಾಗೂ ರಾಜ್ಯದ ಎಲ್ಲಾ ಪ್ರಮುಖ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನೆ (ಏಕನಾಥ್ ಶಿಂಧೆ) ಮೈತ್ರಿಕೂಟ ಮತ್ತೊಮ್ಮೆ ಅಭೂತಪೂರ್ವ ಗೆಲುವು ಸಧಿಸಿದೆ. ಇದರೊಂದಿಗೆ ಜನರು ಮತ್ತೊಮ್ಮೆ ಬಿಜೆಪಿಯ ಅಭಿವೃದ್ಧಿ ರಾಜಕಾರಣಕ್ಕೆ ಮನ್ನಣೆ ನೀಡಿದ್ದಾರೆ ಎಂದು ತಿಳಿಸಿದಾರೆ.

