ದಾವಣಗೆರೆ: ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ, ಅಲ್ಪಸಂಖ್ಯಾತ ಓಲೈಕೆ ನೀತಿ ವಿರುದ್ಧ ಬಿಜೆಪಿ ವತಿಯಿಂದ ಹಮ್ಮಿಕೊಂಡಿರುವ ಜನಾಕ್ರೋಶ ಯಾತ್ರೆಯ ಮೂರನೇ ಹಂತದ ಯಾತ್ರೆ ಸೋಮವಾರ ದಾವಣಗೆರೆಯಿಂದ ಪ್ರಾರಂಭವಾಗಲಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್. ಅಶೋಕ್ ಮತ್ತು ಛಲವಾದಿ ನಾರಾಯಣ ಸ್ವಾಮಿ, ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವ ಬಿ. ಶ್ರೀರಾಮುಲು, ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಸೇರಿದಂತೆ ಹಲವು ನಾಯಕರು ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.
ಜನಾಕ್ರೋಶ ಯಾತ್ರೆ ಹಿನ್ನೆಲೆಯಲ್ಲಿ ದಾವಣಗೆರೆಯ ಪ್ರಮುಖ ರಸ್ತೆ ವೃತ್ತ ಪ್ರತಿಭಟನೆ ಮಾರ್ಗದಲ್ಲಿ ಬ್ಯಾನರ್, ಬಂಟಿಂಗ್ಸ್, ಫ್ಲೆಕ್ಸ್ ಗಳನ್ನು ಅಳವಡಿಸಲಾಗಿದೆ.
ದಾವಣಗೆರೆಯ ಅಪೂರ್ವ ಹೋಟೆಲ್ ಸಮೀಪ ಬೆಳಗ್ಗೆ 10.30 ಕ್ಕೆ ಬಿಜೆಪಿ ಜನಾಕ್ರೋಶ ಯಾತ್ರೆಗೆ ಭವ್ಯ ಸ್ವಾಗತ ಕೋರಲಾಗುವುದು. ನಂತರ ಯಾತ್ರೆ ಜಯದೇವ ವೃತ್ತಕ್ಕೆ ತೆರಳಲಿದ್ದು, ಬಹಿರಂಗ ಸಭೆ ನಡೆಯಲಿದೆ. ನಂತರ ಉಪ ವಿಭಾಗಾಧಿಕಾರಿ ಕಚೇರಿಗೆ ಪಾದಯಾತ್ರೆಯಲ್ಲಿ ತೆರಳಿ ಮನವಿ ಸಲ್ಲಿಸಲಾಗುವುದು.