BIG NEWS: ಕಾಂಗ್ರೆಸ್ ತುಘಲಕ್ ದರ್ಬಾರಿನ ಶತಕದ ಸಂಭ್ರಮದಲ್ಲಿದೆ; ನೂರು ದಿನ 100 ಕರ್ಮಕಾಂಡಗಳು…ಎಂದು ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 100 ದಿನ ಪೂರೈಸಿದ್ದು, 5 ಗ್ಯಾರಂಟಿಗಳಲ್ಲಿ 4 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವ ಸಂಭ್ರಮದಲ್ಲಿದೆ. ಈ ನಡುವೆ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ವಾಗ್ದಾಳಿ ನಡೆಸಿದೆ.

ಗ್ಯಾರಂಟಿಗಳ ಪುಂಗಿ ಊದಿ ಅವುಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವಲ್ಲಿ ಎಡವಿದ್ದು ಅಲ್ಲದೇ ಇಂದಿಗೂ ಸಮರ್ಪಕವಾಗಿ ಅವುಗಳನ್ನು ಜಾರಿಗೆ ತರಲು ಸಾಧ್ಯವಾಗಿಲ್ಲ. ಗ್ಯಾರಂಟಿಗಳ ಅನುಷ್ಠಾನಕ್ಕೂ ಮೊದಲೇ ರಾಜ್ಯದಲ್ಲಿ ಶುರುವಾಗಿದ್ದು ಕಲೆಕ್ಷನ್ ಏಜೆಂಟ್ ಸುರ್ಜೇವಾಲ ದರ್ಬಾರ್ ಎಂದು ಕಿಡಿಕಾರಿದೆ.

ಅಧಿಕಾರಿದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ತುಘಲಕ್ ದರ್ಬಾರಿನ ಶತಕದ ಸಂಭ್ರಮದಲ್ಲಿದೆ. ಸರ್ಕಾರ ನೂರು ದಿನ ಸಾಧಿಸಿದ್ದೇನು ಎಂದು ಹುಡುಕಿದರೆ ನೂರಕ್ಕು ಹೆಚ್ಚು ಹಳವಂಡಗಳೇ ಹೆಚ್ಚು. ಅಧಿಕಾರಿಗಳ ದುರುಪಯೋಗ, ಕಲೆಕ್ಷನ್ ಏಜೆಂಟ್ ಸುರ್ಜೇವಾಲಾ, ಶ್ಯಾಡೋ ಸಿಎಂ, ಕಾಸಿಗಾಗಿ ಪೋಸ್ಟಿಂಗ್, ಮರಳು ಮಾಫಿಯಾ, ರೈತರ ಆತ್ಮಹತ್ಯೆ, ಕಲುಷಿತ ನೀರು, ಕಳಪೆ ಆಹಾರ ವಿತರಣೆ, ಉಡುಪಿಯ ಅಮಾನುಷ ಘಟನೆ… ಅಬ್ಬಬ್ಬಾ ಒಂದಾ ಎರಡಾ ಭಂಡ ಕಾಂಗ್ರೆಸ್ ನ 100 ಕರ್ಮಕಾಂಡಗಳು ತೆರೆಯುತ್ತವೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read