HomeKarnatakaಸಿ.ಟಿ. ರವಿ ಬಂಧಿಸಿ ನಡೆಸಿಕೊಂಡ ರೀತಿ ತಪ್ಪು: ಕಾಂಗ್ರೆಸ್ ನಾಯಕ ಹರಿಪ್ರಸಾದ್ ಅಸಮಾಧಾನ

ಸಿ.ಟಿ. ರವಿ ಬಂಧಿಸಿ ನಡೆಸಿಕೊಂಡ ರೀತಿ ತಪ್ಪು: ಕಾಂಗ್ರೆಸ್ ನಾಯಕ ಹರಿಪ್ರಸಾದ್ ಅಸಮಾಧಾನ

ಬೆಂಗಳೂರು: ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತಾಗಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವಾಚ್ಯ ಪದ ಬಳಸಿದ್ದಾರೆಂದು ಪೊಲೀಸರು ಬಂಧಿಸಿ ಅವರನ್ನು ನಡೆಸಿಕೊಂಡ ರೀತಿಯ ಬಗ್ಗೆ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಸದಸ್ಯ ಹರಿಪ್ರಸಾದ್, ಬೆಳಗಾವಿಯಲ್ಲಿ ನಡೆದ ಅಧಿವೇಶನದ ವೇಳೆ ಪೊಲೀಸರು ಸಿ.ಟಿ. ರವಿ ಅವರನ್ನು ಬಂಧಿಸಿದಾಗ ನಡೆಸಿಕೊಂಡ ರೀತಿ ತಪ್ಪು. ಈ ವಿಚಾರದಲ್ಲಿ ರವಿ ಅವರದ್ದು ಅಥವಾ ಲಕ್ಷ್ಮಿ ಹೆಬ್ಬಾಳ್ಕರ್ ಅವರದ್ದು ತಪ್ಪು ಎಂದು ನಾನು ಹೇಳುವುದಿಲ್ಲ. ಆದರೆ, ಸದನದ ಗೌರವಾನ್ವಿತ ಸದಸ್ಯರನ್ನು ನಡೆಸಿಕೊಂಡ ಕ್ರಮ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular