ಬೆಂಗಳೂರು : ಕಾಳಸಂತೆಕೋರರು, ಕಳ್ಳ-ಖದೀಮರೇ ಬಿಜೆಪಿಯ ಬಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಪಕ್ಷದ ನಿಜವಾದ ಶಕ್ತಿ ಹಣದ ಬಲ ಅಲ್ಲ, ಜನ ಬಲ. ಬಿಜೆಪಿಯಲ್ಲಿ ಹಣ ಬಲ ಇದ್ದರೆ ನಮ್ಮಲ್ಲಿ ಜನಬಲ ಇದೆ. ತೆರಿಗೆ ವಂಚಕರು, ಬ್ಯಾಂಕ್ ಗಳನ್ನು ಮುಳುಗಿಸಿದವರು, ಗಣಿ ಲೂಟಿಕೋರರು, ಕಾಳಸಂತೆಕೋರರು, ಕಳ್ಳ-ಖದೀಮರೇ ಬಿಜೆಪಿಯ ಬಲ. ಬಿಜೆಪಿ ಅಂದ್ರೆ ಭ್ರಷ್ಟರ ಹಣವನ್ನು ನುಂಗಿ ಅವರಿಗೆ ಪ್ರಾಮಾಣಿಕತೆಯ ಸರ್ಟಿಫಿಕೇಟ್ ನೀಡುವ ವಾಷಿಂಗ್ ಮೆಶಿನ್ ಆಗಿದೆ. ಭ್ರಷ್ಟರು ತಾವು ಮಾಡಿದ ಮಹಾಪಾಪಗಳ ಮೇಲಿನ ತನಿಖೆಯಿಂದ ತಪ್ಪಿಸಿಕೊಳ್ಳಬೇಕಾದರೆ, ಶಿಕ್ಷೆಯಿಂದ ಪಾರಾಗಬೇಕಾದರೆ ಬಿಜೆಪಿ ಸೇರಿಕೊಂಡರೆ ಸಾಕು, ಪಾಪಗಳೆಲ್ಲವೂ ತನ್ನಿಂತಾನೆ ಶುದ್ಧವಾಗುತ್ತದೆ. ಅಲ್ಲಿದ್ದುಕೊಂಡು ಎಷ್ಟು ಬೇಕಾದರೂ ಭ್ರಷ್ಟಾಚಾರ ಮಾಡಬಹುದು, ಜನರ ಹಣ ಲೂಟಿ ಮಾಡಬಹುದು. ಅವರ ಮೇಲೆ ಯಾವ ಕೇಸೂ ದಾಖಲಾಗುವುದಿಲ್ಲ. ಯಾವ ತನಿಖಾ ಸಂಸ್ಥೆಯೂ ಹುಡುಕಿಕೊಂಡು ಬರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.
ಐಟಿ, ಇಡಿ ಮತ್ತು ಸಿಬಿಐ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಚುನಾವಣಾ ಬಾಂಡ್ ಗಳ ಮೂಲಕ ಸಾವಿರಾರು ಕೋಟಿ ರೂಪಾಯಿಗಳನ್ನು ಆಡಳಿತಾರೂಢಬಿಜೆಪಿ ಸುಲಿಗೆ ಮಾಡಿರುವುದು ಜಗಜ್ಜಾಹೀರಾಗಿದೆ. ಬಯಲಾಗಿರುವ ಈ ಹಗರಣದಿಂದ ಜನರ ಗಮನ ಬೇರೆ ಕಡೆ ಸೆಳೆಯುವ ಜೊತೆಯಲ್ಲಿ ವಿರೋಧ ಪಕ್ಷಗಳನ್ನೂ ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ದುರುದ್ದೇಶದಿಂದಲೇ ಬಿಜೆಪಿ ಸರ್ಕಾರ ವರಮಾನ ತೆರಿಗೆ ವಂಚನೆಯ ಸುಳ್ಳು ಆರೋಪಗಳನ್ನು ಮಾಡುತ್ತಿದೆ. ಕಳೆದ ಐದು ವರ್ಷಗಳ ಅವಧಿಯಲ್ಲಿ ವಿಜಯ್ ಮಲ್ಯ, ನೀರವ್ ಮೋದಿ ಮೊದಲಾದ ಬ್ಯಾಂಕ್ ವಂಚಕರ 10.09 ಲಕ್ಷ ಕೋಟಿ ರೂಪಾಯಿಯಷ್ಟು ಬ್ಯಾಂಕ್ ಸಾಲವನ್ನು ಮನ್ನಾ ಮಾಡಿರುವ ಮೋದಿಸರ್ಕಾರ ಅವರಿಂದ ಪಡೆದಿರುವ ಕಮಿಷನ್ ಹಣ ಎಷ್ಟು ಎನ್ನುವುದನ್ನು ದೇಶದ ಜನತೆಗೆ ತಿಳಿಸಬೇಕಾಗುತ್ತದೆ ಎಂದು ಎಂದು ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಪಕ್ಷದ ನಿಜವಾದ ಶಕ್ತಿ ಹಣದ ಬಲ ಅಲ್ಲ, ಜನ ಬಲ. ಬಿಜೆಪಿಯಲ್ಲಿ ಹಣ ಬಲ ಇದ್ದರೆ ನಮ್ಮಲ್ಲಿ ಜನಬಲ ಇದೆ. ತೆರಿಗೆ ವಂಚಕರು, ಬ್ಯಾಂಕ್ ಗಳನ್ನು ಮುಳುಗಿಸಿದವರು, ಗಣಿ ಲೂಟಿಕೋರರು, ಕಾಳಸಂತೆಕೋರರು, ಕಳ್ಳ-ಖದೀಮರೇ ಬಿಜೆಪಿಯ ಬಲ. @BJP4India ಅಂದ್ರೆ ಭ್ರಷ್ಟರ ಹಣವನ್ನು ನುಂಗಿ ಅವರಿಗೆ ಪ್ರಾಮಾಣಿಕತೆಯ ಸರ್ಟಿಫಿಕೇಟ್ ನೀಡುವ ವಾಷಿಂಗ್…
— Siddaramaiah (@siddaramaiah) March 30, 2024
ಐಟಿ, ಇಡಿ ಮತ್ತು ಸಿಬಿಐ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಚುನಾವಣಾ ಬಾಂಡ್ ಗಳ ಮೂಲಕ ಸಾವಿರಾರು ಕೋಟಿ ರೂಪಾಯಿಗಳನ್ನು ಆಡಳಿತಾರೂಢ @BJP4India ಸುಲಿಗೆ ಮಾಡಿರುವುದು ಜಗಜ್ಜಾಹೀರಾಗಿದೆ. ಬಯಲಾಗಿರುವ ಈ ಹಗರಣದಿಂದ ಜನರ ಗಮನ ಬೇರೆ ಕಡೆ ಸೆಳೆಯುವ ಜೊತೆಯಲ್ಲಿ ವಿರೋಧ ಪಕ್ಷಗಳನ್ನೂ ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ದುರುದ್ದೇಶದಿಂದಲೇ ಬಿಜೆಪಿ…
— Siddaramaiah (@siddaramaiah) March 30, 2024