HomeKarnatakaBIG NEWS: ಸರ್ಕಾರಿ ಪ್ರೌಢಶಾಲೆಯಲ್ಲಿ ವಾಮಾಚಾರ; ಶಾಲೆಗೆ ಬಂದ ಶಿಕ್ಷಕರು, ವಿದ್ಯಾರ್ಥಿಗಳು ಶಾಕ್...!

BIG NEWS: ಸರ್ಕಾರಿ ಪ್ರೌಢಶಾಲೆಯಲ್ಲಿ ವಾಮಾಚಾರ; ಶಾಲೆಗೆ ಬಂದ ಶಿಕ್ಷಕರು, ವಿದ್ಯಾರ್ಥಿಗಳು ಶಾಕ್…!

ಯಾದಗಿರಿ: ಕಿಡಿಗೇಡಿಗಳ ದುಷ್ಕೃತ್ಯ ನೋಡಿ. ಸರ್ಕಾರಿ ಶಾಲೆಯ ಆವರಣದಲ್ಲಿಯೇ ವಾಮಾಚಾರ ಮಾಡಿರುವ ಘಟನೆ ಯಾದಗಿರಿ ತಾಲೂಕಿನಲ್ಲಿ ನಡೆದಿದೆ.

ಯಾದಗಿರಿ ತಾಲೂಕಿನ ಬಸವಂತಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಕಿಡಿಗೇಡಿಗಳು ವಾಮಾಚಾರ ಮಾಡಿದ್ದಾರೆ. ಶಾಲೆಯ ಮುಂದೆ ನಿಂಬೆಹಣ್ಣು, ತೆಂಗಿನಕಾಯಿ, ಕುಂಕುಮ ಇಟ್ಟು ವಾಮಾಚಾರ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ಬೆಳಿಗ್ಗೆ ವಿದ್ಯಾರ್ಥಿಗಳು ಶಾಲೆ ಬಳಿ ಬಂದಾಗಲೇ ಈ ವಿಚಾರ ಬೆಳಕಿಗೆ ಬಂದಿದೆ. ಶಾಲೆಯ ಕೊಠಡಿ ಬಾಗಿಲು ತೆರೆದು ನೋಡಿದಾಗ ವಿದ್ಯಾರ್ಥಿಗಳು ಹಾಗೂ ಶಿಕ್ಷಕರೇ ಶಾಕ್ ಆಗಿದ್ದಾರೆ. ಶಾಲೆಯ ಎಲ್ಲಾ ಕೊಠಡಿಗಳಲ್ಲೂ ಮಾಟಮಂತ್ರ ಮಾಡಲಾಗಿದೆ.

ವಿಷಯ ತಿಳಿದು ಶಾಲೆಗೆ ಆಗಮಿಸಿದ ಗ್ರಾಮಸ್ಥರು ಸ್ಥಳದಲ್ಲಿದ್ದ ವಸ್ತುಗಳನ್ನು ತೆರವುಗೊಳಿಸಿ ಶುಚಿಗೊಳಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular