HomeLive NewsSHOCKING : ಬೆಳಗಾವಿಯಲ್ಲಿ ಮಹಿಳಾ ಅಧಿಕಾರಿಯ ಖಾಸಗಿ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌’ಮೇಲ್ : 50 ಲಕ್ಷಕ್ಕೆ...

SHOCKING : ಬೆಳಗಾವಿಯಲ್ಲಿ ಮಹಿಳಾ ಅಧಿಕಾರಿಯ ಖಾಸಗಿ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌’ಮೇಲ್ : 50 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಮೂವರು ಅರೆಸ್ಟ್.!


ಬೆಳಗಾವಿ: ಮಹಿಳಾ ಅಧಿಕಾರಿಯೊಬ್ಬರ ಖಾಸಗಿ ದೃಶ್ಯಗಳನ್ನು ಗುಪ್ತವಾಗಿ ಸೆರೆಹಿಡಿದು, ಬ್ಲ್ಯಾಕ್‌’ಮೇಲ್ ಮಾಡುತ್ತಿದ್ದ ಆರೋಪಿಗಳನ್ನು ಬೆಳಗಾವಿ ಪೊಲೀಸರು ಭೇದಿಸಿದ್ದಾರೆ. 50 ಲಕ್ಷ ರೂಪಾಯಿ ಹಣ ನೀಡದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಯ ಹಿನ್ನೆಲೆ:
ಸಂತ್ರಸ್ತ ಮಹಿಳಾ ಅಧಿಕಾರಿಯ ಮನೆಯಲ್ಲಿ ಗುಪ್ತವಾಗಿ ಹಿಡನ್ ಕ್ಯಾಮೆರಾಗಳನ್ನು ಅಳವಡಿಸಿ, ಅವರ ಖಾಸಗಿ ಕ್ಷಣಗಳನ್ನು ಆರೋಪಿಗಳು ಚಿತ್ರೀಕರಿಸಿದ್ದರು. ಈ ವಿಡಿಯೋಗಳನ್ನು ಇಟ್ಟುಕೊಂಡು ಅಧಿಕಾರಿಗೆ ಬೆದರಿಕೆ ಹಾಕಲಾರಂಭಿಸಿದ ಆರೋಪಿಗಳು, ಬರೋಬ್ಬರಿ 50 ಲಕ್ಷ ರೂಪಾಯಿ ಹಣ ನೀಡುವಂತೆ ಬೇಡಿಕೆಯಿಟ್ಟಿದ್ದರು. ಹಣ ನೀಡದಿದ್ದರೆ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದಾಗಿ ಬೆದರಿಸಿದ್ದರು.

ಪೊಲೀಸ್ ಕಮಿಷನರ್ ಮೊರೆ ಹೋದ ಅಧಿಕಾರಿ
ಆರೋಪಿಗಳ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತ ಮಹಿಳಾ ಅಧಿಕಾರಿಯು ಧೈರ್ಯ ಮಾಡಿ ಬೆಳಗಾವಿ ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದರು. ಪ್ರಕರಣದ ಗಂಭೀರತೆ ಅರಿತ ಕಮಿಷನರ್ ಅವರು ತಕ್ಷಣ ತನಿಖೆಗೆ ಆದೇಶಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರ್ಯಾಚರಣೆ ಮತ್ತು ಜಪ್ತಿ
ತನಿಖೆ ನಡೆಸಿದ ಮಾಳ ಮಾರುತಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. 3 ಮೊಬೈಲ್ ಫೋನ್ಗಳು, 6 ಹಿಡನ್ ಕ್ಯಾಮೆರಾಗಳು,1 ಪೆನ್ ಡ್ರೈವ್ ಮತ್ತು ಮೆಮೋರಿ ಕಾರ್ಡ್ಗಳು, 2 ಒಟಿಜಿ (OTG) ಮತ್ತು ಒಂದು ಇನ್ನೋವಾ ಕ್ರಿಸ್ಟಾ ಕಾರು ವಶಪಡಿಸಿಕೊಳ್ಳಲಾಗಿದೆ.

ಮನೆ ಕೆಲಸದವನೇ ಕಿಂಗ್ ಪಿನ್ ?
ಈ ಪ್ರಕರಣದಲ್ಲಿ ಮಹಿಳಾ ಅಧಿಕಾರಿಯ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಕೈವಾಡವಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸದ್ಯ ಆತ ಪರಾರಿಯಾಗಿದ್ದು, ಪೊಲೀಸರು ಆತನ ಪತ್ತೆಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. ಆತನೇ ಮನೆಯಲ್ಲಿ ಹಿಡನ್ ಕ್ಯಾಮೆರಾ ಅಳವಡಿಸಿ ಈ ಸಂಚು ರೂಪಿಸಿರುವ ಶಂಕೆ ವ್ಯಕ್ತವಾಗಿದೆ. ಬೆಳಗಾವಿಯ ಮಾಳ ಮಾರುತಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular