HomeLatest NewsBIG NEWS: ತೀವ್ರಗೊಂಡ ಪ್ರತಿಭಟನೆ, ಬಿಕ್ಕಟ್ಟು: ಭಾರತದಲ್ಲಿ ವೀಸಾ ಸೇವೆ ಸ್ಥಗಿತಗೊಳಿಸಿದ ಬಾಂಗ್ಲಾ

BIG NEWS: ತೀವ್ರಗೊಂಡ ಪ್ರತಿಭಟನೆ, ಬಿಕ್ಕಟ್ಟು: ಭಾರತದಲ್ಲಿ ವೀಸಾ ಸೇವೆ ಸ್ಥಗಿತಗೊಳಿಸಿದ ಬಾಂಗ್ಲಾ

ನವದೆಹಲಿ: ಬಾಂಗ್ಲಾದೇಶದಲ್ಲಿ ಪ್ರತಿಭಟನೆ, ಹಿಂಸಾಚಾರ ತೀವ್ರಗೊಂಡಿದ್ದು, ಈ ಬೆಳವಣಿಗೆ ನಡುವೆಯೇ ಭಾರತದಲ್ಲಿ ವೀಸಾ ಸೇವೆ ಸ್ಥಗಿತಗೊಳಿಸಿದೆ.

ನವದೆಹಲಿ ಹಾಗೂ ತ್ರಿಪುರಾದಲ್ಲಿ ತನ್ನ ರಾಜತಾಂತ್ರಿಕ ಕಚೇಯಲ್ಲಿ ವೀಸಾ ಸೇವೆಗಳನ್ನು ಬಾಂಗ್ಲಾ ಸ್ಥಗಿತಗೊಳಿಸಿದೆ. ಬಾಂಗ್ಲಾದಲ್ಲಿ ಅಲ್ಪಸಂಖ್ಯಾತದ ದಾಳಿ ವಿರೋಧಿಸಿ ಕಳೆದ ಕೆಲ ದಿನಗಳಿಂದ ನವದೆಹಲಿ ಹಾಗೂ ತ್ರಿಪುರಾ ರಾಯಭಾರ ಕಚೇರಿಗಳ ಮುಂದೆ ಪ್ರತಿಭಟನೆಗಳು ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ವೀಸಾ ಸೇವೆ ಸ್ಥಗಿತಗೊಳಿಸಿದೆ.

ನವದೆಹಲಿಯಲ್ಲಿರುವ ಬಾಂಗ್ಲಾ ರಾಯಭಾರ ಕಚೇರಿ ಹಾಗೂ ತ್ರಿಪುರಾ ರಾಯಭಾರ ಕಚೇರಿಗಳು ವೀಸಾ ಸೇವೆ ಸ್ಥಗಿತಗೊಳಿಸಿರುವುದಾಗಿ ಪ್ರಕಟಣೆ ಹೊರಡಿಸಿವೆ. ಇನ್ನು ಪಶ್ಚಿಮ ಬಂಗಾಳದ ಸಿರಿಗುರಿಯಲ್ಲಿರುವ ಖಾಸಗಿ ಸಂಸ್ಥೆಗಳು ಕೂಡ ವೀಸಾ ಸೇವೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿವೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾರತದ ಹೈಕಮಷನರ್ ಕಚೇರಿ ಎದುರೂ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಳೆದ ಗುರುವಾರದಿಂದಲೇ ವೀಸಾ ಸೇವೆಯನ್ನು ಭಾರತ ಸ್ಥಗಿತಗೊಳಿಸಿದೆ.

ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಮರಣದ ಬಳಿಕ ಡಿ.12ರಿಂದ ಬಾಂಗ್ಲಾದಲ್ಲಿ ಮತ್ತಷ್ಟು ಪ್ರತಿಭಟನೆಗಳು ತೀವ್ರಗೊಂಡಿವೆ. ಶೇಖ್ ಹಸೀನಾ ಸರ್ಕಾರ ಪತನಕ್ಕೆ ಕಾರಣವಾದ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಈತ ಪ್ರಮುಖ ಪಾತ್ರವಹಿಸಿದ್ದ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular