HomeIndiaBreaking News: ಕೆಂಪುಕೋಟೆ ಬಳಿ ಸ್ಫೋಟ ಮಾಹಿತಿ, ಪೊಲೀಸರು ಅಲರ್ಟ್

Breaking News: ಕೆಂಪುಕೋಟೆ ಬಳಿ ಸ್ಫೋಟ ಮಾಹಿತಿ, ಪೊಲೀಸರು ಅಲರ್ಟ್

ದೆಹಲಿಯ ಕೆಂಪುಕೋಟೆ ಬಳಿ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ. ಕೆಂಪುಕೋಟೆಯ ಬಳಿ ಸ್ಪೋಟ ಸಂಭವಿಸಬಹುದು ಎಂಬ ಮಾಹಿತಿಗಳ ಹಿನ್ನಲೆಯಲ್ಲಿ ಪೊಲೀಸರು ತುರ್ತಾಗಿ ಈ ಕ್ರಮಗಳನ್ನು ಕೈಗೊಂಡಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ ಸ್ಫೋಟ ಸಂಭವಿಸಬಹುದು ಎಂದು ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಆದ್ದರಿಂದ ಏಕಾಏಕಿ ಭದ್ರತೆ ಹೆಚ್ಚಿಸಲಾಗಿದೆ.

ಇಂಡಿಯಾ ಟುಡೇ ಮಾಹಿತಿ ಪ್ರಕಾರ ಚಾಂದಿನಿ ಚೌಕ್ ಪಕ್ಕದ ದೇವಾಲಯ ಸೇರಿದಂತೆ ವಿವಿಧ ಪ್ರದೇಶಗಳನ್ನು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳು ಟಾರ್ಗೆಟ್ ಮಾಡಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫೆಬ್ರವರಿ 6ರಂದು ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯ ಬಳಿಕ ಉಗ್ರರು ಭಾರತವನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಆದ್ದರಿಂದ ದೆಹಲಿಯಲ್ಲಿ ಸ್ಫೋಟ ನಡೆಸಬಹುದು ಎಂಬುದು ಮಾಹಿತಿಯಾಗಿದೆ.

ಯಾವ ಪ್ರದೇಶವನ್ನು ಟಾರ್ಗೆಟ್ ಮಾಡಲಾಗಿದೆ?, ಯಾವ ಸಂಘಟನೆ ಸ್ಫೋಟ ನಡೆಸಬಹುದು ಎಂಬ ಬಗ್ಗೆ ಖಚಿತವಾದ ಮಾಹಿತಿ ಲಭ್ಯವಾಗಿಲ್ಲ. ಆದರೆ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ.

ನವದೆಹಲಿಯ ಕೆಂಪುಕೋಟೆ ಸಮೀಪ 2025ರ ನವೆಂಬರ್ 10ರಂದು ಕಾರನ್ನು ಸ್ಫೋಟಿಸಲಾಗಿತ್ತು. ಈ ಘಟನೆಯಲ್ಲಿ ಸುಮಾರು 10-13 ಮಂದಿ ಸಾವನ್ನಪ್ಪಿದ್ದರು ಮತ್ತು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular