ಧೈರ್ಯವಾಗಿರಿ…ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಜೆಡಿಎಸ್ ಕಾರ್ಯಕರ್ತ

ಚಿಕ್ಕಮಗಳೂರು: ರಾಜ್ಯದ ಗಮನ ಸೆಳೆದಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪರಾಭವಗೊಂಡ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರಿಗೆ ಜೆಡಿಎಸ್ ಕಾರ್ಯಕರ್ತರೊಬ್ಬರು ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಕಡೂರು ಮೂಲದ ಹರ್ಷಿತ್ ಎಂಬುವವರು ರಕ್ತದಲ್ಲಿ ನಿಖಿಲ್ ಕುಮಾರಸ್ವಾಮಿಗೆ ಪತ್ರ ಬರೆದಿದ್ದು, ನೀವು ಸೋತಿರಬಹುದು. ಆದರೆ, ಜನರ ಮನಸ್ಸಿನಲ್ಲಿ ಇದ್ದೀರಿ. ನಮ್ಮಂತಹ ಎಷ್ಟೋ ನಿಷ್ಠಾವಂತ ಕಾರ್ಯಕರ್ತರಲ್ಲಿ ಪಕ್ಷದ ಉಸಿರು ಇದೆ. ಒಂದಲ್ಲ ಒಂದು ದಿನ ಒಳ್ಳೆಯತನ ಗೆದ್ದೇ ಗೆಲ್ಲುತ್ತದೆ. ನಿಮ್ಮ ಜೊತೆಗೆ ನಾವಿದ್ದೇವೆ. ನನ್ನ ರಕ್ತದಲ್ಲಿ ಪತ್ರ ಬರೆದಿದ್ದೇನೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read