ಮೆಟ್ರೋ ಸಮಯದಲ್ಲಿ ಬದಲಾವಣೆ: ಭಾನುವಾರ ಬೆಳಿಗ್ಗೆ 6 ಗಂಟೆಯಿಂದಲೇ ಸಂಚಾರ ಆರಂಭ

ಬೆಂಗಳೂರು: ಯು.ಪಿ.ಎಸ್.ಸಿ. ಪೂರ್ವಭಾವಿ ಪರೀಕ್ಷೆ ಇರುವ ಹಿನ್ನೆಲೆಯಲ್ಲಿ ಮೇ 28 ರಂದು ಭಾನುವಾರ ಬೆಳಗ್ಗೆ 6 ಗಂಟೆಯಿಂದಲೇ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ.

ಭಾನುವಾರ ಯು.ಪಿ.ಎಸ್.ಸಿ. ಪೂರ್ವಭಾವಿ ಪರೀಕ್ಷೆ ನಡೆಯಲಿರುವುದರಿಂದ ಮೆಟ್ರೋ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ಅಂದು ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಬೆಳಗ್ಗೆ 6 ಗಂಟೆಗೆ ಮೆಟ್ರೋ ರೈಲು ಸೇವೆ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ತಿಳಿಸಿದೆ.

ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ, ರೇಷ್ಮೆ ಸಂಸ್ಥೆ, ಕೃಷ್ಣರಾಜಪುರ, ವೈಟ್ ಫೀಲ್ಡ್ ಟರ್ಮಿನಲ್ ನಿಲ್ದಾಣಗಳಿಂದ ಸಂಚಾರ ಆರಂಭವಾಗಲಿದ್ದು, ಈ ಸೇವೆಯನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳುವಂತೆ ಬಿಎಮ್ಆರ್‌ಸಿಎಲ್ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read