ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಫುಟ್ ಪಾತ್ ಮೇಲೆ ನಿಂತಿದ್ದ ಐವರ ಮೇಲೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಹರಿದು ಹೋಗಿದೆ. ಬಳಿಕ ಬಸ್ ಪಕ್ಕದಲ್ಲಿದ್ದ ಕ್ಯಾಂಟಿನ್ ಗೆ ಗುದ್ದಿದೆ.
ಬೆಳಿಗ್ಗೆ 8:45ರ ಸುಮಾರಿಗೆ ಪೀಣ್ಯ 2ನೇ ಹಂತದಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಮಗು ಸೇರಿ ಐವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಗಿದೆ.
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕ್ಯಾಂಟಿನ್ ನಲ್ಲಿದ್ದ ವಸ್ತುಗಳು ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.